ಪ್ರಧಾನಿ ನರೇಂದ್ರಮೋದಿಯವರ ದಕ್ಷ ಮಾರ್ಗದರ್ಶನದಲ್ಲಿ “ಆಪರೇಶನ್ ಸಿಂಧೂರ” ಕಾರ್ಯಾಚರಣೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಸೈನಿಕರನ್ನು ಅಭಿನಂದಿಸಿ, ಅವರಿಗೆ ಮುಂದೆಯೂ ಸರ್ವರೀತಿಯ ಯಶಸ್ಸನ್ನು ಕೋರಿ ಗುರುವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆಯೊಂದಿಗೆ ಪೂಜೆ ಸಲ್ಲಿಸಿದರು.
ಸೈನಿಕರಿಂದ ದೇಶದ ರಕ್ಷಣಾಕಾರ್ಯ ಯಶಸ್ವಿಯಾಗಲಿ ಹಾಗೂ ಭಯ ಮತ್ತು ಆತಂಕ ನಿವಾರಣೆಯಾಗಿ ಎಲ್ಲೆಲ್ಲೂ ಸದಾ ಶಾಂತಿ, ನೆಮ್ಮದಿ ಮತ್ತು ಸಾಮರಸ್ಯ ನೆಲೆಗೊಳ್ಳಲಿ ಎಂದು ಹೆಗ್ಗಡೆಯವರು ಹಾರೈಸಿದ್ದಾರೆ.
ಆಪರೇಶನ್ ಸಿಂಧೂರ” ಯಶಸ್ವಿ ಕಾರ್ಯಾಚರಣೆ: ಧರ್ಮಸ್ಥಳದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ.
RELATED ARTICLES