ಬೆಂಗಳೂರು: ಪಾಕಿಸ್ತಾನದ ಹಾಗೂ ಪಾಕಿಸ್ತಾನ ಅತಿಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ನಡೆಸಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ. ನಮ್ಮ ಯೋಧರು ಭಯೋತ್ಪಾದಕರ ನೆಲೆಗಳನ್ನು ನಾಶ ಮಾಡಿ ಪರಾಕ್ರಮ ಮೆರೆದಿದ್ದಾರೆ. ದೇಶದ ಸೈನಿಕರಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಪತ್ರಿಕಾಗೋಷ್ಠಿಗೆ ಬರುವ ವೇಳೆ ಸಿದ್ದರಾಮಯ್ಯ ಹಣೆಗೆ ದೊಡ್ಡದಾಗಿ ಸಿಂಧೂರ ಇಟ್ಟುಕೊಂಡು ಬಂದಿದ್ದು ಗಮನ ಸೆಳೆಯಿತು. ಈ ಕುರಿತು ಕೇಳಲಾದ ಪ್ರಶ್ನೆಗೆ ಅವರು, ‘‘ದೇವಸ್ಥಾನಕ್ಕೆ ಹೋಗಿ ಬಂದಿದ್ದೆ’’ ಎಂದರು.
ಆಪರೇಷನ್ ಸಿಂಧೂರ್: ಭಾರತೀಯ ಸೇನೆಯನ್ನು ಹಣೆಗೆ ತಿಲಕ ಇಟ್ಟುಕೊಂಡೇ ಹೊಗಳಿದ ಸಿಎಂ ಸಿದ್ದರಾಮಯ್ಯ
RELATED ARTICLES