ಯುವವಾಹಿನಿ(ರಿ.) ಹೆಜಮಾಡಿ ಘಟಕದ ಆಶ್ರಯದಲ್ಲಿ ವಿಧ್ಯಾನಿಧಿಯ ಸಹಾಯರ್ಥವಾಗಿ “ಡಾ|| ದೇವದಾಸ್ ಕಾಪಿಕಾಡ್” ರವರ ಎನ್ನನೇ ಕಥೆ ತುಳು ಹಾಸ್ಯಮಯ ನಾಟಕ ಹೆಜಮಾಡಿ ಬಿಲ್ಲವರ ಸಂಘದ ಜಯ. ಸಿ. ಸುವರ್ಣ ಸಭಾಗೃಹದಲ್ಲಿ ಜರಗಿತು.
ಈ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್ ಉಪಸ್ಥಿತರಿದ್ದರು.

ತೆಲಿಕೆದ ಬೊಳ್ಳಿ ಡಾ|| ದೇವದಾಸ್ ಕಾಪಿಕಾಡ್ ಮತ್ತು ಕೊಡುಗೈ ದಾನಿ ಹಾಗೂ ಹೆಜಮಾಡಿ ಸಂಘದ ಹಿತೈಷಿಗಳಾದ ಶಶಿಕುಮಾರ್ ಮಸ್ಕತ್ ಇವರನ್ನು ಸನ್ಮಾನಿಸಲಾಯಿತು.
ಸನ್ಮಾನ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಹೆಜಮಾಡಿ ಬಿಲ್ಲವರ ಸಂಘದ ಅಧ್ಯಕ್ಷರಾದ ಮೋಹನ್ ದಾಸ್ ಹೆಜಮಾಡಿ ಮಾತನಾಡಿ , ಯುವ ಸಂಘಟನೆಗಳು ಮನೋರಂಜನಾ ಚಟುವಟಿಕೆಗಳನ್ನು ಸದಾ ನಡೆಸುವುದರಿಂದ ಸಂಘಟನೆಗಳು ಸದೃಢವಾಗಿ ಸಮಾಜದಲ್ಲಿ ಉತ್ತಮ ಕೆಲಸಗಳನ್ನು ಮಾಡಲು ಸಾಧ್ಯವಾಗುತ್ತದೆ ಎಂದು ಹಿತನುಡಿಗಳನ್ನು ತಿಳಿಸಿದರು.
ವೇದಿಕೆಯಲ್ಲಿ ಯುವವಾಹಿನಿ (ರಿ.) ಹೆಜಮಾಡಿ ಘಟಕದ ಅಧ್ಯಕ್ಷರಾದ ನಿಶಾಂಕ್ ಎಸ್ ಕೋಟ್ಯಾನ್, ಹೆಜಮಾಡಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ದಯಾನಂದ ಹೆಜಮಾಡಿ, ಬಿಲ್ಲವರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಬೋದ್ ಚಂದ್ರ, ಮಹಿಳಾ ಮಂಡಳಿಯ ಅಧ್ಯಕ್ಷರಾದ ಲಾವಣ್ಯ ಪ್ರಬೋದ್, ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಲೋಕೇಶ್ ಅಮೀನ್ ಉಪಸ್ಥಿತರಿದ್ದರು. ಮನೋಹರ್ ಹೆಜಮಾಡಿ ಕಾರ್ಯಕ್ರಮವನ್ನು ನಿರೂಪಿಸಿದರು.

