ಕಾರ್ಕಳ : ಪಿ.ಆರ್.ಎನ್. ಅಮೃತಭಾರತಿ ಪದವಿಪೂರ್ವ ಕಾಲೇಜಿನಲ್ಲಿ ನಿಟ್ಟೆ ವಿಶ್ವವಿದ್ಯಾಲಯದ ವತಿಯಿಂದ ವಿದ್ಯಾರ್ಥಿಗಳಿಗಾಗಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ನಿಟ್ಟೆ ವಿಶ್ವವಿದ್ಯಾಲಯದ ಸಾರ್ವಜನಿಕ ಸಂಪರ್ಕಾಧಿಕಾರಿ ಮನೋರಂಜಿನಿ ಶೆಟ್ಟಿ ಅವರು ಪದವಿ ಹಂತದಲ್ಲಿ ಲಭ್ಯವಿರುವ ವಿವಿಧ ಕೋರ್ಸ್‌ಗಳು, ಅವುಗಳ ಅವಕಾಶಗಳು ಹಾಗೂ ಮುಂದಿನ ಶಿಕ್ಷಣದ ಆಯ್ಕೆಗಳ ಕುರಿತು ಮಾಹಿತಿ ನೀಡಿದರು.
ನಿಟ್ಟೆ ವಿಶ್ವವಿದ್ಯಾಲಯದಲ್ಲಿ ಸಹಾಯಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ವಿವೇಕ್ ರಂಜನ್ ಭಂಡಾರಿ ಅವರು ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ವಿವಿಧ ಪದವಿ ಕೋರ್ಸ್‌ಗಳು, ಶಿಕ್ಷಣದ ಅವಕಾಶಗಳು ಹಾಗೂ ವೃತ್ತಿ ಆಯ್ಕೆಗಳ ಕುರಿತು ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರಕಾಶ್ ಜೋಗಿ ಉಪಸ್ಥಿತರಿದ್ದರು. ಸಂಖ್ಯಾಶಾಸ್ತ್ರ ಉಪನ್ಯಾಸಕ ಚಂದ್ರಹಾಸ ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.
ವಿದ್ಯಾರ್ಥಿಗಳಿಗೆ ಪದವಿ ಶಿಕ್ಷಣದ ನಂತರದ ಅವಕಾಶಗಳು ಹಾಗೂ ಸೂಕ್ತ ವೃತ್ತಿ ಆಯ್ಕೆಗಳ ಬಗ್ಗೆ ಅರಿವು ಮೂಡಿಸುವಲ್ಲಿ ಕಾರ್ಯಕ್ರಮ ಸಹಕಾರಿಯಾಯಿತು.
