ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ.ಗೋ. (ಪದ್ಯಾಣ ಗೋಪಾಲಕೃಷ್ಣ) ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆ.10ರಂದು ಬೆಳಗ್ಗೆ ೧೧.೩೦ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯಿತು.
2026ನೇ ಸಾಲಿನ ಪ್ರಶಸ್ತಿಗೆ ಆಯ್ಕೆಯಾಗಿರುವ ಪತ್ರಕರ್ತ ಸಂಶುದ್ದೀನ್ ಎಣ್ಮೂರು ಅವರಿಗೆ ಮಂಗಳೂರು ವಿಶ್ವ ವಿದ್ಯಾಲಯದ ಉಪ ಕುಲಪತಿ ಪ್ರೊ.ಪಿ.ಎಲ್.ಧರ್ಮ ಅವರು ಪ್ರಶಸ್ತಿ ವಿತರಣೆ ಮಾಡಲಿದ್ದಾರೆ.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್.ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ
ಪಿ.ಬಿ.ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಉಪಸ್ಥಿತರಿರುವರು ಎಂದು ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ. ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
