ದೆಂದೂರು ಕೊಲ್ಲು ಕೃಷ್ಣ ಶೆಟ್ಟಿ ಫೌಂಡೇಶನ್ ಮತ್ತು ಉಡುಪಿ ಜೈಂಟ್ ಗ್ರೂಪ್ ವತಿಯಿಂದ ದೆಂದೂರು ಕೊಲ್ಲು ಕೆ. ಶೆಡ್ತಿ ನೆನಪಿನ ಪಾಡ್ಡನ ಪ್ರಶಸ್ತಿ ಪ್ರದಾನ ಸಮಾರಂಭ ಏ.15ರಂದು ಕಾಪು ಕೆ.ಒನ್ ಹೊಟೇಲಿನಲ್ಲಿ ನಡೆಯಿತು. ಸಾಹಿತಿ ದಯಾಮಣಿ ಎಸ್. ಶೆಟ್ಟಿ ಎಕ್ಕಾರು ಕಾರ್ಯಕ್ರಮ ಉದ್ಘಾಟಿಸಿದರು. ಕನ್ನಡ ಜಾನಪದ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಸುವರ್ಣ ಕಟಪಾಡಿ ಅಧ್ಯಕ್ಷತೆ ವಹಿಸಿದ್ದರು.
ಉದ್ಯಮಿಗಳಾದ ಶಶಿಧರ ನಾಯಕ್, ಚೇತನ್ ಕುಮಾರ್ ಶೆಟ್ಟಿ ಬ್ರಹ್ಮಾವರ, ದೆಂದೂರು ಸುಭಾಸ್ ಎಮ್. ಸಾಲಿಯನ್ ನೆಲ್ಲಿಕಟ್ಟೆ ಮೂಡುಬೆಳ್ಳೆ, ಉಡುಪಿ ಜೈಂಟ್ ಸಂಸ್ಥೆ ಅಧ್ಯಕ್ಷ ಯಶವಂತ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಪಾಡ್ದನಗಾರ್ತಿ ಗೋಪಿ ಪಾನರ ಮೂಡುಬೆಟ್ಟು ಕಟಪಾಡಿ ಇವರಿಗೆ ಪಾಡ್ದನ ಪ್ರಶಸ್ತಿಯನ್ನು 5 ಸಾವಿರ ನಗದಿನೊಂದಿಗೆ ನೀಡಿ ಗೌರವಿಸಲಾಯಿತು ಎಂದು ಸಂಸ್ಥೆಯ ಗೌರವಾಧ್ಯಕ್ಷೆ ದೀಪಾ ಚೇತನ್ ಕುಮಾರ್ ಶೆಟ್ಟಿ ಹಾಗೂ ಅಧ್ಯಕ್ಷ ದಯಾನಂದ ಕೆ. ಶೆಟ್ಟಿ ದೆಂದೂರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.