ಪದ್ಮುಂಜ: ಸೆ. 25 ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಕ್ಕೆ 2024-25 ನೇ ಸಾಲಿನಲ್ಲಿ ಅತ್ಯಧಿಕ ಮೌಲ್ಯದ ಕೃಷಿ ಯಂತ್ರೋಪಕರಣ ಹಾಗೂ ಬಿಡಿ ಭಾಗಗಳ ಖರೀದಿ ವ್ಯವಹಾರ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿರುವುದನ್ನು ಗುರುತಿಸಿ ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ ಸಂಘ ಲಿ. ಇದರ ಮಹಾಸಭೆಯಲ್ಲಿ ಸೆ 25 ರಂದು ಅಭಿನಂದನಾ ಪತ್ರ ಹಾಗೂ ಪ್ರಶಸ್ತಿ ನೀಡಿ ಗೌರವಿಸಿದರು.
ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಂಕಿತ ಬಿ. ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ ಸಂಘ ಲಿ. ಇದರ ಅಧ್ಯಕ್ಷರಾದ ರವೀಂದ್ರ, ಉಪಾಧ್ಯಕ್ಷರಾದ ಕಿಶೋರ್ ಕುಮಾರ್ ಶೆಟ್ಟಿ, ನಿರ್ದೇಶಕರುಗಳು, ಮುಖ್ಯಕಾರ್ಯನಿರ್ವಣಾಧಿಕಾರಿ ಉಪಸ್ಥಿತರಿದ್ದರು.

