ಪಡುಬಿದ್ರಿ : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು – ಗೌಜಿ ಈವೆಂಟ್ಸ್ ಮಾಲಿಕ ಅಭಿ ಸಾವು

0
222

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿ ತೋಟಕ್ಕೆ ಉರುಳಿ ಕಾರಿನಲ್ಲಿದ್ದ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಪಡುಬಿದ್ರಿ ರಾ.ಹೆ.66 ರಲ್ಲಿ ತಡರಾತ್ರಿ 2 ಗಂಟೆಯ ಸುಮಾರಿಗೆ ಎರ್ಮಾಳು ತೆಂಕ ಸೇತುವೆ ಬಳಿ ಸಂಭವಿಸಿದೆ.ಮೃತ ವ್ಯಕ್ತಿಯನ್ನು ಮಂಗಳೂರಿನ ಗೌಜಿ ಈವೆಂಟ್ಸ್ ಮಾಲಿಕ ಅಭಿ ಎಂದು ಗುರುತಿಸಲಾಗಿದೆ.

ಉಡುಪಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರನ್ನು ಅವರೇ ಚಲಾಯಿಸುತ್ತಿದ್ದು, ಸಹಪ್ರಯಾಣಿಕರು ಯಾರೂ ಇರಲಿಲ್ಲ. ಹಿಂದಿನ ವಾಹನಗಳಲ್ಲಿ ಅವರ ಗೆಳೆಯರು ಇದ್ದರು ಎಂದು ತಿಳಿದು ಬಂದಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್‌ ಕಂಬ ಧರಾಶಾಯಿಯಾಗಿ, ಕಾರು ನಜ್ಜುಗುಜ್ಜಾಗಿದೆ. ಈ ಸಂದರ್ಭ ವಿದ್ಯುತ್‌ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದಂತಾಗಿದೆ. ಕೂಡಲೇ ಅಭಿಯವರನ್ನು ಸ್ಥಳೀಯರ ಸಹಕಾರದಿಂದ ಆತನ ಸ್ನೇಹಿತರು ಮುಕ್ಕದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟದ್ದಾರೆಂದು ತಿಳಿದು ಬಂದಿದೆ. ಶ್ರಮ ಜೀವಿಯಾಗಿದ್ದ ಅಭಿ ಕಷ್ಟದಿಂದ ಮೇಲೆ ಬಂದು ತನ್ನದೇ ಈವೆಂಟ್ ತಂಡ ಕಟ್ಟಿಕೊಂಡಿದ್ದರು ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಹೆಜಮಾಡಿ ಟೋಲ್ ಸಿಬ್ಬಂದಿ ಮತ್ತು ಪಡುಬಿದ್ರಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here