
ಪಡುಬಿದ್ರಿ : ಪಡುಬಿದ್ರಿ ಪೇಟೆಯಿಂದ ಹೆಜಮಾಡಿ ಕಡೆಗೆ ಸಾಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೀನು ತುಂಬಿದ್ದ ವಾಹನ ಪಲ್ಟಿಯಾದ ಘಟನೆ ನಡೆದಿದೆ. KA 47 A 5621 ನೋಂದಣಿ ಸಂಖ್ಯೆಯ ಈ ವಾಹನ ಪಲ್ಟಿಯಾಗಿದ್ದರಿಂದ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಯಿತು.
ಮುಂಜಾಗ್ರತಾ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿಯ ಒಂದು ಬದಿಯ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿತ್ತು ,ವಾಹನ ಸವಾರರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದ್ದು, ವಾಹನಗಳನ್ನು ಸರ್ವಿಸ್ ರಸ್ತೆಯ ಮೂಲಕ ಸಂಚರಿಸಲು ಅವಕಾಶ ನೀಡಲಾಗಿತ್ತು
ಸದ್ಯ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಈ ಮಾರ್ಗವಾಗಿ ಸಂಚರಿಸುವ ವಾಹನ ಸವಾರರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
