ಪಡುಕುಡೂರು ಶಾಲೆ: ಶತಮಾನೋತ್ಸವ ಸಮಿತಿ ಅಧ್ಯಕ್ಷರಾಗಿ ಭಾರವಿ ಶೆಟ್ಟಿ ನೇಮಕ

0
90

ಪಡುಕುಡೂರು : ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಂಭ್ರಮದಲ್ಲಿದ್ದು ಶತಮಾನೋತ್ಸವವನ್ನು ವೈಭವದಿಂದ ನಡೆಸಲು ಸಮಿತಿಯನ್ನು ರಚಿಸಲಾಗಿದೆ. ಅಧ್ಯಕ್ಷರಾಗಿ ಯುವ ಮುಂದಾಳು ಪಡುಕುಡೂರು ಭಾರವಿ ಶೆಟ್ಟಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಸಂಚಾಲಕರಾಗಿ ಯುವ ಮುಖಂಡ ಪ್ರಸನ್ನ ಶೆಟ್ಟಿ ಜಯಲೀಲಾ ಅವರನ್ನು ನೇಮಕ ಮಾಡಲಾಗಿದೆ. ಪ್ರಧಾನ ಕಾರ್ಯದರ್ಶಿಯಾಗಿ ಪಡುಕುಡೂರು ಶಾಲೆಯ ಮುಖ್ಯ ಶಿಕ್ಷಕ ಹರೀಶ ಪೂಜಾರಿ ಎಸ್‌ ಹಾಗೂ ಕೋಶಾಧಿಕಾರಿಯಾಗಿ ಸಂತೋಷ ಆಚಾರ್ಯ ಮಾವಿನಕಟ್ಟೆ ಅವರನ್ನು ಆಯ್ಕೆ ಮಾಡಲಾಗಿದೆ. ಜೊತೆಗೆ ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷರು, ಗೌರವ ಸಲಹೆಗಾರರು, ಉಪಾಧ್ಯಕ್ಷರು, ಗೌರವ ಕಾರ್ಯದರ್ಶಿ, ಸಹ ಸಂಚಾಲಕರು, ಸಹ ಕೋಶಾಧಿಕಾರಿ, ಸಂಘಟನಾ ಕಾರ್ಯದರ್ಶಿ ಹಾಗೂ ಕಾರ್ಯಕಾರಿ ಸಮಿತಿಯನ್ನು ರಚಿಸಲಾಗಿದೆ. ಶತಮಾನೋತ್ಸವವನ್ನು ವೈಭವದಿಂದ ನಡೆಸಲು ಸಮಾಲೋಚನಾ ಸಭೆಯನ್ನು ಸಮಿತಿಯ ಜೊತೆಗೆ ಊರಿನ ಪ್ರಮುಖರು ಮತ್ತು ವಿಧ್ಯಾಭಿಮಾನಿಗಳ ಸಮ್ಮುಖದಲ್ಲಿ ನಡೆಸಲಾಯಿತು.

LEAVE A REPLY

Please enter your comment!
Please enter your name here