ಪಡುಕುಡೂರಿನಲ್ಲಿ ಶಾಲೆಯ ಸಾಧನೆಗೆ ಸಂಭ್ರಮ.
ಪಡುಕುಡೂರು : ಬ್ರಹ್ಮಾವರದ ಕಾವಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ೧೪ ಮತ್ತು ೧೭ರ ವಯೋಮಾನದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ ೨೦೨೫ರಲ್ಲಿ 14ರ ವಯೋಮಾನದ ಜಿಲ್ಲಾ ಮಟ್ಟದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಕಾರ್ಕಳ ಕ್ರೈಸ್ಟ್ ಕಿಂಗ್ ಶಾಲೆಯ ಬಾಲಕಿಯರನ್ನೊಳಗೊಂಡ ಪಡುಕುಡೂರು ಶಾಲಾ ಬಾಲಕಿಯರ ತಂಡ ಫೈನಲ್ ಪಂದ್ಯದಲ್ಲಿ ನೇರ ಎರಡು ಸೆಟ್ ಗಳಲ್ಲಿ ಅತ್ಯುತ್ತಮ ಪ್ರದರ್ಶನದೊಂದಿಗೆ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ. ಪಡುಕುಡೂರು ಶಾಲಾ ಇತಿಹಾಸದಲ್ಲಿ ವಾಲಿಬಾಲ್ ಪಂದ್ಯಾಟದ ತಂಡ ಹೊಸ ಮೈಲುಗಲ್ಲು ಸಾಧಿಸಿದೆ. ಮುಖ್ಯ ಶಿಕ್ಷಕ ಹರೀಶ ಪೂಜಾರಿ, ಶಿಕ್ಷಕಿಯರು, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರವಿ ಶೆಟ್ಟಿ, ಉಪಾಧ್ಯಕ್ಷ ಹರೀಶ ಪೂಜಾರಿ, ಸದಸ್ಯರು, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಸನ್ನ ಶೆಟ್ಟಿ ಜಯಲೀಲಾ, ಗೌರವಾಧ್ಯಕ್ಷರಾದ ಪಡುಪರ್ಕಳ ಹರೀಶ ಶೆಟ್ಟಿ ಮುಂಬೈ, ಪದಾಧಿಕಾರಿಗಳು, ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಭಾರವಿ ಶೆಟ್ಟಿ ಮತ್ತು ಪದಾಧಿಕಾರಿಗಳು, ಪಡುಕುಡೂರು ಎಂ.ಡಿ.ಅಧಿಕಾರಿ ಯೂತ್ ಕ್ಲಬ್ ಅಧ್ಯಕ್ಷ ಸಂದೀಪ್ ಶೆಟ್ಟಿ ಮತ್ತು ಪದಾಧಿಕಾರಿಗಳು ಹಾಗೂ ವಿದ್ಯಾಭಿಮಾನಿಗಳು ವಿದ್ಯಾರ್ಥಿಗಳ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ.

