ಮುಲ್ಕಿ: ಪಡುಪಣಂಬೂರು ಶ್ರೀ ಉಮಾಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಧ್ವಜಮರದ ಪ್ರತಿಷ್ಠಾಪನಾ ಕಾರ್ಯ ಕ್ಷೇತ್ರದ ತಂತ್ರಿಗಳಾದ ಶಿಬರೂರು ವೇದವ್ಯಾಸ ತಂತ್ರಿ ಹಾಗೂ ಕ್ಷೇತ್ರದ ಮೊಕ್ತೇಸರ ಹಾಗೂ ಅರ್ಚಕ ರಂಗನಾಥ ಭಟ್ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು,ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ರಾಮದಾಸ್ ಪುತ್ರನ್ ಮತ್ತು ಸಮಿತಿಯ ಸದಸ್ಯರು ಪದಾಧಿಕಾರಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.