ಅಭಿವೃದ್ಧಿ ಕಾರ್ಯಗಳು ನಿರಂತರ -ಶಾಸಕ ಉಮಾನಾಥ ಕೋಟ್ಯಾನ್
ಮುಲ್ಕಿ: ಗ್ರಾಮೀಣ ಪ್ರದೇಶದಲ್ಲಿ ಸರಕಾರ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಯತ್ನಿಸಿದ್ದು ಅಭಿವೃದ್ಧಿ ಕಾರ್ಯ ನಿರಂತರವಾಗಿ ನಡೆಯಲಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು
ಅವರು ಪಡುಪಣಂಬೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಲ್ನಾಡು ರಾಷ್ಟ್ರೀಯಹೆದ್ದಾರಿ ಸೇತುವೆ ಬಳಿಯ ತೈತೋಟದ ಸಮೀಪ ಸುಮಾರು 14 ಲಕ್ಷ ವೆಚ್ಚದ ಕಾಲುಸಂಕ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡುಪಣಂಬೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಕುಸುಮಾ ಚಂದ್ರಶೇಖರ್ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಪಂಚಾಯತ್ ಉಪಾಧ್ಯಕ್ಷ ಹೇಮನಾಥ ಅಮೀನ್, ಸದಸ್ಯರಾದ ವಿನೋದ್ ಸಾಲ್ಯಾನ್ ಬೆಳ್ಳಾಯರು,ಮಾಜೀ ತಾಪಂ ಸದಸ್ಯೆ ಸಾವಿತ್ರಿ ಸುವರ್ಣ, ಬಿಜೆಪಿ ನಾಯಕರಾದ ಲಕ್ಷ್ಮಣ ಸಾಲ್ಯಾನ್,ಶ್ಯಾಮ್ ಪ್ರಸಾದ್,ದಿವ್ಯೇಶ್ ದೇವಾಡಿಗ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುದೀರ್, ಗುತ್ತಿಗೆದಾರ ಮಹಮದ್ ಇಮ್ರಾನ್ ಮತ್ತಿತರರು ಉಪಸ್ಥಿತರಿದ್ದರು.