ಹುಬ್ಬಳ್ಳಿ : ಹುಬ್ಬಳ್ಳಿಯ ನಾಗಶೆಟ್ಟಿಕೊಪ್ಪದಲ್ಲಿ ಪೈಲ್ವಾನ್ ಓರ್ವನನ್ನು ಆತನ ಗೆಳೆಯರೇ ಭೀಕರವಾಗಿ ಹತ್ಯೆಗೈದ ಘಟನೆ ನಡೆದಿದೆ.
ಕೊಲೆಯಾದ ಪೈಲ್ವಾನ್ ಪ್ರಕಾಶ್ ಮಾನೆ ಎಂದು ತಿಳಿದು ಬಂದಿದೆ. ಪ್ರಕಾಶ್ ಮಾನೆಯ ಸ್ನೇಹಿತರಾದ ಕಿರಣ್ ಬಡಿಗೇರ ಹಾಗೂ ಸಂಗಮೇಶ್ ಎಂಬಾತ ಈ ಕೃತ್ಯವೆಸಗಿದ್ದಾರೆ.
ಚಾಕುವಿನಿಂದ ಇರಿದು ಬಳಿಕ ಕಟ್ಟಿಗೆಯಿಂದ ಹೊಡೆದು ಬರ್ಬರವಾಗಿ ಕೊಲೆಗೈಯ್ಯಲಾಗಿದೆ. ಪೈಲ್ವಾನನನ್ನು ಯಾವ ಕಾರಣಕ್ಕೆ ಕೊಂದಿದ್ದಾರೆ ಎಂದು ಆರೋಪಿಗಳನ್ನು ವಶಕ್ಕೆ ಪಡೆದು ಇದೀಗ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಕೇಶವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.