Saturday, December 14, 2024
HomeUncategorizedಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ ಫಯರ್ ವತಿಯಿಂದ ಚಿತ್ರಕಲಾ ಸ್ಪರ್ಧೆ

ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ ಫಯರ್ ವತಿಯಿಂದ ಚಿತ್ರಕಲಾ ಸ್ಪರ್ಧೆ

ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ ಫಯರ್ ವತಿಯಿಂದ ಅಂತರಾಷ್ಟ್ರೀಯ ಲಯನ್ಸ್ ಸಂಸ್ಥೆಯ ಶಾಂತಿ ಸಂದೇಶದ ಚಿತ್ರಕಲಾ ಸ್ಪರ್ಧೆ ಈ ಬಾರಿ ಸರಹದ್ದು ರಹಿತ ಶಾಂತಿ ಎಂಬ ಶಿರೋನಾಮೆಡಿ ಅಂತರಾಷ್ಟ್ರೀಯ ಮಟ್ಟದಲ್ಲಿ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಿದ್ದು ಈ ಚಿತ್ರಕಲಾ ಸ್ಪರ್ಧೆಯು 14 ವರ್ಷ ಒಳಗಿನ ಶಾಲಾ ವಿದ್ಯಾರ್ಥಿಗಳಿಗೆ ನೆರವೇರಿಸುವರೇ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ ಫಯರ್ ಈ ಬಾರಿ 5 ಶಾಲೆಗಳನ್ನು ಆಯ್ಕೆ ಮಾಡಿಕೊಂಡಿದ್ದು ಅದರಲ್ಲಿ ಪ್ರಥಮ ಶಾಲೆಯಾದ ದಕ್ಷಿಣ ಕನ್ನಡ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೆಎಸ್ ರಾವ್ ನಗರ ಕಾರ್ನಾಡ್ (ತಾಲೂಕಿನ ಏಕೈಕ ಪಿಎಂಶ್ರೀ ) ಶಾಲೆಯಲ್ಲಿ ಸುಮಾರು 20 ವಿದ್ಯಾರ್ಥಿಗಳಲ್ಲಿ ಸ್ಪರ್ಧೆಯನ್ನು ಏರ್ಪಡಿಸಿ ಅದರಲ್ಲಿ ಅತ್ಯುತ್ತಮವಾದ ಚಿತ್ರಗಳಿಗೆ ಪ್ರಥಮ ಹಾಗೂ ದ್ವಿತೀಯ ಅಲ್ಲದೆ ಭಾಗವಹಿಸಿದ ಎಲ್ಲರಿಗೂ ಪ್ರಶಂಸನಾ ಪತ್ರ ಹಾಗೂ ಬಹುಮಾನಗಳನ್ನು ವಿತರಿಸಲಾಯಿತು ಈ ಕಾರ್ಯಕ್ರಮದಲ್ಲಿ ಸ್ಥಾಪಕ ಅಧ್ಯಕ್ಷರು ಪ್ರಾಂತ್ಯ ಅಧ್ಯಕ್ಷರಾದ ವೆಂಕಟೇಶ ಹೆಬ್ಬಾರ್ ಮಾತನಾಡಿ ನಮ್ಮ ಸಂಸ್ಥೆಯು ಸರ್ಕಾರಿ ಶಾಲೆಗಳಲ್ಲಿ ಇರುವ ಪ್ರತಿಭೆಗಳನ್ನು ಗುರುತಿಸಿ ಗೌರವಿಸುದೊಂದಿಗೆ ಅವರಲ್ಲಿರುವ ಪ್ರತಿಭೆಯನ್ನು ಹೊರ ತರುವರೆ ಅವರನ್ನು ಹುರಿದುಂಬಿಸಿ ಹೇಳಿದರು. ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ ಫಯರ್ ನ ಪ್ರಥಮಉಪ ಅಧ್ಯಕ್ಷರಾದ ಪುಷ್ಪರಾಜ್ ಚೌಟ ಕಾರ್ಯದರ್ಶಿ ಪ್ರತಿಭಾ ಹೆಬ್ಬಾರ್ ನಿಕಟಪೂರ್ವ ಅಧ್ಯಕ್ಷರಾದ ಸುದಿರ್ ಎನ್ ಬಾಳಿಗ, ಶಾಲಾ ಮುಖ್ಯೋಪಾಧ್ಯಾಯರಾದ ದಿನೇಶ್ ಕೆ,ಎಸ್ಡಿಎಂಸಿ ಅಧ್ಯಕ್ಷರಾದ ಶ್ರೀಮತಿ ಜ್ಯೋತಿ, ಶಿಕ್ಷಕಿ ಶ್ರೀದೇವಿ, ಹಿರಿಯ ಶಿಕ್ಷಕರು ಸಹ ಶಿಕ್ಷಕರು ಶಿಕ್ಷಕೇತರರು ಮೊದಲಾದವರು ಉಪಸ್ಥಿತರಿದ್ದರು

RELATED ARTICLES
- Advertisment -
Google search engine

Most Popular