Saturday, April 26, 2025
Homeರಾಷ್ಟ್ರೀಯಪಾಕ್‌ ಮಸೀದಿಯಲ್ಲಿ ಬಾಂಬ್ ಸ್ಫೋಟ: 5 ಸಾವು, 20 ಮಂದಿಗೆ ಗಾಯ

ಪಾಕ್‌ ಮಸೀದಿಯಲ್ಲಿ ಬಾಂಬ್ ಸ್ಫೋಟ: 5 ಸಾವು, 20 ಮಂದಿಗೆ ಗಾಯ

ಮಸೀದಿಯ ಒಳಗಡೆಯೇ ಬಾಂಬ್ ಸ್ಫೋಟಗೊಂಡ ಪರಿಣಾಮ ಐವರು ಮೃತಪಟ್ಟು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ಸಂಭವಿಸಿದೆ.

ನೌಶೇರಾ ಜಿಲ್ಲೆಯ ಅಕೋರಾ ಖಟ್ಟಕ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮದರಸಾದ ಆವರಣದಲ್ಲಿರುವ ಮಸೀದಿಯಲ್ಲಿ ಇಂದು ಪ್ರಾರ್ಥನೆ ಸಲ್ಲಿಸುವ ಸಮಯದಲ್ಲಿ ಬಾಂಬ್ ಸ್ಪೋಟಗೊಂಡಿದೆ.

ಸ್ಫೋಟದಲ್ಲಿ ಗಾಯಗೊಂಡವರ ಪೈಕಿ ಜಮಿಯತ್ ಉಲೇಮಾ-ಎ-ಇಸ್ಲಾಂ-ಸಾಮಿ (ಜೆಯುಐ-ಎಸ್) ನಾಯಕ ಮೌಲಾನಾ ಹಮಿದುಲ್ ಹಕ್ ಹಕ್ಕಾನಿ ಕೂಡ ಸೇರಿದ್ದಾರೆ. ಸ್ಫೋಟ ಸಂಭವಿಸಿದ ಸಂದರ್ಭದಲ್ಲಿ ಅವರು ಪ್ರಾರ್ಥನೆ ಸಲ್ಲಿಸುತ್ತಾ ಮುಂದಿನ ಸಾಲಿನಲ್ಲಿದ್ದರು ಎನ್ನಲಾಗಿದೆ.

ಅಫ್ಘಾನ್ ತಾಲಿಬಾನ್‌ನೊಂದಿಗೆ ಮೌಲಾನಾ ಹಮಿದುಲ್ ಹಕ್ ಹಕ್ಕಾನಿ ಸಂಪರ್ಕ ಹೊಂದಿದ್ದಾರೆ. ಇಲ್ಲಿಯವರೆಗೆ ಸ್ಫೋಟದ ಹೊಣೆಯನ್ನು ಯಾವುದೇ ಗುಂಪು ವಹಿಸಿಕೊಂಡಿಲ್ಲ. ಪ್ರಾಥಮಿಕ ತನಿಖೆ ಪ್ರಕಾರ ಇದು ಆತ್ಮಹುತಿ ಬಾಂಬ್ ಎಂದು ಪರಿಗಣಿಸಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಪಾಕಿಸ್ತಾನದ ಪ್ರಧಾನ ಮಂತ್ರಿ ಶೆಹಬಾಜ್ ಷರೀಫ್ ಇದನ್ನು ತೀವ್ರವಾಗಿ ಖಂಡಿಸಿದ್ದಾರೆ.

RELATED ARTICLES
- Advertisment -
Google search engine

Most Popular