ಭಾರತದೊಳಗೆ ಪಾಕಿಸ್ತಾನದ ಹಡಗುಗಳಿಗೆ ನಿಷೇಧ

0
176

ನವದೆಹಲಿ, ಮೇ 3: ಪಹಲ್ಗಾಮ್ ದಾಳಿಯ ಬಳಿಕ ಭಾರತ ನೆರೆಯ ದೇಶವಾದ ಪಾಕಿಸ್ತಾನದ (Pakistan) ವಿರುದ್ಧ ಅನೇಕ ರಾಜತಾಂತ್ರಿಕ ಕ್ರಮಗಳನ್ನು ತೆಗೆದುಕೊಂಡಿದೆ. ಎರಡೂ ದೇಶಗಳ ನಡುವೆ ಯುದ್ಧ ನಡೆಯುವ ಸಾಧ್ಯತೆಯ ಬಗ್ಗೆ ಜಗತ್ತಿನಾದ್ಯಂತ ಚರ್ಚೆಯಾಗುತ್ತಿದೆ. ಪಾಕಿಸ್ತಾನದೊಂದಿಗಿನ ಎಲ್ಲ ಸಂಪರ್ಕಗಳನ್ನೂ ಭಾರತ ಕಳೆದುಕೊಳ್ಳುತ್ತಿದೆ. ಇದೀಗ ಭಾರತದ ಬಂದರುಗಳು, ಹಡಗು ಸಾಗಣೆ ಮತ್ತು ಜಲಮಾರ್ಗಗಳ ಸಚಿವಾಲಯವು ಇಂದಿನಿಂದ ಪಾಕಿಸ್ತಾನ ಧ್ವಜ ಹೊಂದಿರುವ ಹಡಗುಗಳು ಭಾರತೀಯ ಬಂದರುಗಳಿಗೆ ಪ್ರವೇಶಿಸುವುದನ್ನು ನಿಷೇಧಿಸಿದೆ. ಹಾಗೇ, ಸುರಕ್ಷತಾ ದೃಷ್ಟಿಯಿಂದ ಭಾರತೀಯ ಧ್ವಜ ಹೊಂದಿರುವ ಹಡಗುಗಳು ಪಾಕಿಸ್ತಾನದ ಬಂದರುಗಳಿಗೆ ಭೇಟಿ ನೀಡುವುದನ್ನು ಕೂಡ ನಿಷೇಧಿಸಿದೆ.

ಭಾರತೀಯ ಆಸ್ತಿಗಳು, ಸರಕು ಮತ್ತು ಬಂದರು ಮೂಲಸೌಕರ್ಯವನ್ನು ರಕ್ಷಿಸಲು 1958ರ ಮರ್ಚೆಂಟ್ ಶಿಪ್ಪಿಂಗ್ ಕಾಯ್ದೆಯ ಸೆಕ್ಷನ್ 411ರ ಅಡಿಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಈ ನಿರ್ಬಂಧಗಳನ್ನು ವಿಧಿಸಲಾಗಿದೆ. ಬಂದರುಗಳು, ಹಡಗು ಮತ್ತು ಜಲಮಾರ್ಗಗಳ ಸಚಿವಾಲಯದ ಆದೇಶದಂತೆ, ಪಾಕಿಸ್ತಾನದ ಧ್ವಜವನ್ನು ಹೊಂದಿರುವ ಹಡಗುಗಳು ಯಾವುದೇ ಭಾರತೀಯ ಬಂದರಿಗೆ ಭೇಟಿ ನೀಡಲು ಅನುಮತಿ ಇಲ್ಲ. ಹಾಗೇ, ಭಾರತೀಯ ಧ್ವಜ ಹಡಗು ಪಾಕಿಸ್ತಾನದ ಯಾವುದೇ ಬಂದರುಗಳಿಗೆ ಭೇಟಿ ನೀಡಬಾರದು ಎಂದು ಸೂಚಿಸಲಾಗಿದೆ.

LEAVE A REPLY

Please enter your comment!
Please enter your name here