ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಮೂಡುಬಿದಿರೆ ತಾಲೂಕಿನ ಪಾಲಡ್ಕ ಗ್ರಾಮದ ಮಾತ್ರಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಹಾಲು ಒಕ್ಕೂಟದ ನಿರ್ದೇಶಕ ಸುಚರಿತ ಶೆಟ್ಟಿ ಅವರು ದೀಪ ಪ್ರಜ್ವಲನೆ ಮಾಡಿ, ಮಾತೃಶ್ರೀ ಅಮ್ಮ ನವರು ಮಹಿಳಾ ಸಬಲೀಕರಣಕ್ಕಾಗಿ ಮಾಡಿರುವ ಕಾರ್ಯಕ್ರಮ ಶ್ಲಾಘನಿಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಕ್ಯೋಪಾಧ್ಯಾಯರಾದ ಮೊಬೆಲ್ ಡಿಸೋಜ ರವರು ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ತಾಲೂಕಿನ ಯೋಜನಾಧಿಕಾರಿ ಧನಂಜಯ ಭಾಗವಹಿಸಿ ಮಾತನಾಡಿ, ಹಿಂದಿನ ಕಾಲದ ಆಹಾರ ಪದ್ಧತಿಗಳ ಪರಿಚಯ ಹಾಗೂ ಉತ್ತಮ ಆರೋಗ್ಯಕ್ಕೆ ಯಾವೆಲ್ಲಾ ಆಹಾರ ವನ್ನು ಸೇವಿಸಬೇಕು ಇದರ ಪರಿಚಯಿಸುವ ಉದ್ದೇಶ ದಿಂದ ಈ ಒಂದು ಕಾರ್ಯಕ್ರಮ ವನ್ನು ಆಚರಣೆಯನ್ನು ಮಾಡುತ್ತಿದ್ದೇವೆ. ಹಾಗೂ ಮನೆಯಲ್ಲಿರುವ ಮಹಿಳೆ ಆರೋಗ್ಯವಾಗಿದ್ದರೆ ಇಡೀ ಕುಟುಂವವೇ ಆರೋಗ್ಯ ದಿಂದ ಇರುತ್ತದೆ ಎಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಇನ್ನೊರ್ವ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಆರೋಗ್ಯ ಅಧಿಕಾರಿ ಶ್ವೇತಾ ಅವರು ಮಾತನಾಡಿ, ಪೌಷ್ಟಿಕ ಆಹಾರ ಅಂದರೆ ಯಾವುದು, ಯಾವಾಗ ಯಾವ ಆಹಾರ ಸೇವನೆ ಮಾಡಬೇಕು. ನಮ್ಮ ಆರೋಗ್ಯ ಕಾಪಾಡಬೇಕಾದರೆ ಆಹಾರದ ಉಪಯೋಗ ಹೇಗಿರಬೇಕು ಎಂಬ ಬಗ್ಗೆ ಸವಿವಾರವಾಗಿ ಮಾಹಿತಿ ನೀಡಿದರು.
ಕಾರ್ಯಕ್ರಮ ದಲ್ಲಿ ಮುಖ್ಯ ಅತಿಥಿಗಳಾಗಿ ಒಕ್ಕೂಟದ ಅಧ್ಯಕ್ಷರಾದ ಸುಕೇಶ್ ರವರು, ಶಾಲಾಭಿವೃದ್ಧಿ ಸಮಿತಿ ಯ ಅಧ್ಯಕ್ಷರಾದ ರಾಜೇಶ್ ಪೂಜಾರಿ, ವಲಯದ ಮೇಲ್ವಿಚಾರಕರಾದ ಶ್ರೀನಿವಾಸ್ ಕೇಂದ್ರದ ಎಲ್ಲಾ ಸದಸ್ಯರು, ಒಕ್ಕೂಟದ ಸದಸ್ಯರು ಭಾಗವಹಿಸಿದ್ದರು., ಸೇವಾಪ್ರತಿನಿಧಿ ಶಾರದಾ ರವರು ಉಪಸ್ಥಿತರಿದ್ದರು. ಪ್ರಮೀಳಾ ರವರು ಸ್ವಾಗತಿಸಿ, ಶ್ರೀಮತಿ ಶಾರದಾ ರವರು ಧನ್ಯವಾದ ವಿತ್ತರು. ಜ್ಞಾನ ವಿಕಾಸ ಸನಾನ್ವಯಧಿಕಾರಿ ಕಾರ್ಯಕ್ರಮ ನಿರೂಪಿಸಿದರು.

