ಕ್ರೈಸ್ತರಿಂದ ಶ್ರದ್ಧಾ ಭಕ್ತಿಯ ಪಾಮ್​ ಸಂಡೆ ಆಚರಣೆ

0
10

ಉಡುಪಿ: ಯೇಸು ಕ್ರಿಸ್ತರು ಜೆರುಸಲೇಂ ನಗರ ಪ್ರವೇಶಿಸಿದ ಸಂಕೇತವಾಗಿ “ಗರಿಗಳ ಭಾನುವಾರ ಹಬ್ಬ’ ಎಂದೇ ಪ್ರಸಿದ್ಧಿ ಪಡೆದಿರುವ ಪಾಮ್​ ಸಂಡೆ ಆಚರಣೆ ಜಿಲ್ಲಾದ್ಯಂತ ಕೆಸ್ತರಿಂದ ಶ್ರದ್ಧಾಭಕ್ತಿಯಿಂದ ನಡೆಯಿತು.
ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತಾಧಿಕಾರಿ ವಂ. ಡಾ. ಜೆರಾಲ್ಡ್​ ಐಸಾಕ್​ ಲೋಬೊ ಕಲ್ಯಾಣಪುರ ಮಿಲಾಗ್ರಿಸ್​ ಪ್ರಧಾನ ದೇವಾಲಯದಲ್ಲಿ ನಡೆದ ಪಾಮ್​ ಸಂಡೆ ಧಾರ್ಮಿಕ ವಿಧಿವಿಧಾನದಲ್ಲಿ ಭಾಗವಹಿಸಿ ಸಂದೇಶ ನೀಡಿದರು. ಚರ್ಚಿನ ಪ್ರಧಾನ ಧರ್ಮಗುರು ವಂ. ಫರ್ಡಿನಾಂಡ್​ ಗೊನ್ಸಾಲ್ವಿಸ್​, ಸಹಾಯಕ ಧರ್ಮಗುರು ವಂ. ಪ್ರದಿಪ್​ ಕಾರ್ಡೊಜಾ ಉಪಸ್ಥಿತರಿದ್ದರು.
ಚರ್ಚುಗಳಲ್ಲಿ ವಿಶೇಷ ಪ್ರಾರ್ಥನೆ
ಜಿಲ್ಲೆಯ ಎಲ್ಲ ಚರ್ಚುಗಳಲ್ಲಿ ಕೆಸ್ತರು ಬೆಳಗ್ಗಿನ ಪ್ರಾರ್ಥನಾ ವಿಧಿಯಲ್ಲಿ ಪಾಲ್ಗೊಂಡು ತೆಂಗಿನ ಗರಿಗಳನ್ನು ಹಿಡಿದು ಮುಖ್ಯ ರಸ್ತೆಗಳಲ್ಲಿ ಮೆರವಣಿಗೆಯಲ್ಲಿ ಸಾಗಿದರು. ಚರ್ಚುಗಳಲ್ಲಿ ಯೇಸುವಿನ ಕಷ್ಟದ ದಿನಗಳನ್ನು ನೆನಪಿಸಿಕೊಂಡು ಬಲಿಪೂಜೆಯನ್ನು ನೆರವೇರಿಸಲಾಯಿತು. ಎಲ್ಲಾ ಚರ್ಚುಗಳಲ್ಲಿ ಪಾಮ್​ ಸಂಡೆಯ ಪ್ರಯುಕ್ತ ವಿಶೇಷ ಪೂಜೆಗಳು ಜರುಗಿದವು. ಉಡುಪಿ ಶೋಕಮಾತಾ ದೇವಾಲಯದಲ್ಲಿ ಚಾರ್ಲ್ಸ್​ ಮಿನೇಜಸ್​, ಶಿರ್ವ ಆರೋಗ್ಯ ಮಾತಾ ಚರ್ಚಿನಲ್ಲಿ ಚರ್ಚಿನ ಪ್ರಧಾನ ಧರ್ಮಗುರು ಹಾಗೂ ನಿಯೋಜಿತ ಬಿಷಪ್​ ಡಾ. ಲೆಸ್ಲಿ ಸಿ ಡಿಸೋಜಾ, ತೊಟ್ಟಂ ಸಂತ ಅನ್ನಮ್ಮ ದೇವಾಲಯಲ್ಲಿ ಧರ್ಮಗುರು ಡೆನಿಸ್​ ಡೆಸಾ, ಸಾಸ್ತಾನ ಚರ್ಚಿನಲ್ಲಿ ಸುನೀಲ್​ ಡಿಸಿಲ್ವಾ, ಉಪಸ್ಥಿತಿಯಲ್ಲಿ ವಿಶೇಷ ಪೂಜೆ ನಡೆಯಿತು.
ಪವಿತ್ರ ಸಪ್ತಾಹ
ಪಾಮ್​ ಸಂಡೆ ಆಚರಣೆಯೊಂದಿಗೆ ಕೆಸ್ತರ ಪವಿತ್ರ ಸಪ್ತಾಹ ಆರಂಭಗೊಳ್ಳುತ್ತದೆ. ಗುರುವಾರ ತನ್ನ ಶಿಷ್ಯರೊಂದಿಗೆ ಯೇಸುವಿನ ಕೊನೆಯ ಭೋಜನ ಹಾಗೂ ಶಿಫ್ಯಿರ ಪಾದಗಳನ್ನು ತೊಳೆದ ದಿನವನ್ನು ಸ್ಮರಿಸಲಾಗುತ್ತದೆ. ಶುಕ್ರವಾರ ಯೇಸುಕ್ರಿಸ್ತರ ಮರಣದ ದಿನವಾದ ಗುಡ್​ ಪೆಡೆ ಆಚರಿಸಲಾಗುತ್ತದೆ. ಶನಿವಾರ ಈಸ್ಟರ್​ ಜಾಗರಣೆ ಮತ್ತು ಭಾನುವಾರ ಯೇಸುಕ್ರಿಸ್ತರ ಪುನರುತ್ಥಾನದ ಪ್ರಯುಕ್ತ ಈಸ್ಟರ್​ ಹಬ್ಬ ಆಚರಿಸಲಾಗುತ್ತದೆ.

LEAVE A REPLY

Please enter your comment!
Please enter your name here