ನ.7 ರಂದು ಪಣಪಿಲ ಜಯ ವಿಜಯ ಕಂಬಳ

0
9

ಮೂಡುಬಿದಿರೆ : ತಾಲೂಕಿನ ಪಣಪಿಲ ಜಯ ವಿಜಯ ಜೋಡುಕರೆ ಕಂಬಳ ನವೆಂಬರ್ 7ರಂದು ನಡೆಯಲಿದೆ. ಸಾಧ್ಯವಾದಷ್ಟು ಮಟ್ಟಿಗೆ ನಿಗದಿತ ಸಮಯದೊಳಗೆ ಕಂಬಳವನ್ನು ಮುಗಿಸುವ ನಿರ್ಧಾರವನ್ನು ಮಾಡಲಾಗಿದೆ. 17ನೇ ವರ್ಷದ ಹೊನಲು ಬೆಳಕಿನ ಕಂಬಳ ಋತುವಿನ ಮೊದಲ ಕಂಬಳವಾಗಿದ್ದು ವ್ಯವಸ್ಥಿತವಾಗಿ ನಡೆಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ ಅಶ್ವಥ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದ ಅಧ್ಯಕ್ಷ ಯುವರಾಜ್ ಜೈನ್ ನಂದೊಟ್ಟು, ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಚಂದ್ರಹಾಸ ಸನಿಲ್, ಶಿಸ್ತು ಸಮಿತಿಯ ಅಧ್ಯಕ್ಷ ಭಾಸ್ಕರ್ ಕೋಟ್ಯಾನ್, ಕೋಶಾಧಿಕಾರಿ ಲೋಕೇಶ್ ಶೆಟ್ಟಿ, ರಾಜ್ಯ ಸಮಿತಿಯ ಕಾರ್ಯದರ್ಶಿ ವಿಜಯಕುಮಾರ್ ಕಂಗಿನಮನೆ, ಮಾತನಾಡಿ ಸಮಿತಿಯ ತೀರ್ಮಾನವನ್ನು ಸಾಧ್ಯವಾದಷ್ಟು ಅಳವಡಿಸಿಕೊಂಡು ಉತ್ತಮ ರೀತಿಯಲ್ಲಿ ಕಂಬಳ ನಡೆಯುವಂತೆ ಪ್ರಯತ್ನಿಸಲಾಗುವುದು. ಪ್ರತಿಯೊಂದು ಹಂತದ ಲೆಕ್ಕಾಚಾರಗಳನ್ನು ನಿರ್ಧರಿಸಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಹೆಚ್ಚಿನ ಕಂಬಳದ ಅಧ್ಯಕ್ಷರುಗಳು, ಕಾರ್ಯಕಾರಿ ಸಮಿತಿಯ ಸದಸ್ಯರುಗಳು ಹಾಜರಿದ್ದರು.