ಪಂಚರಾಜ್ಯ ಚುನಾವಣೆ ಫಲಿತಾಂಶ: ಬಿಜೆಪಿ ಸಾಧನೆಗೆ ವಿ. ಸುನಿಲ್ ಕುಮಾರ್ ಪ್ರಶಂಸೆ

0
67

ಕಾರ್ಕಳ: ಪಂಚರಾಜ್ಯಗಳ ಚುನಾವಣಾ ಫಲಿತಾಂಶಗಳ ಹಿನ್ನೆಲೆಯಲ್ಲಿ ಶಾಸಕ ಹಾಗೂ ಮಾಜಿ ಸಚಿವ ವಿ ಸುನಿಲ್ ಕುಮಾರ್ ಅವರು ಪ್ರಕಟಣೆ ನೀಡಿದ್ದು, ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಂಡುಬಂದ ರಾಜಕೀಯ ಬದಲಾವಣೆಗಳ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಸುದೀರ್ಘ ಕಾಲದಿಂದ ಪಶ್ಚಿಮ ಬಂಗಾಳವನ್ನು ಕಾಡುತ್ತಿದ್ದ ಅರಾಜಕತೆಗೆ ಅಲ್ಲಿನ ಮತದಾರರು ಅಂತ್ಯ ಹಾಡಿದ್ದಾರೆ ಎಂದು ಅವರು ಹೇಳಿದ್ದಾರೆ. ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಕನಸು ಇಂದು ನನಸಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮುಂದುವರೆದು, ನರೇಂದ್ರ ಮೋದಿ, ಅಮಿತ್ ಶಾ ಹಾಗೂ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರ ನಿರಂತರ ಪ್ರಯತ್ನದಿಂದ ತೃಣಮೂಲ ಕಾಂಗ್ರೆಸ್‌ನ ಗೂಂಡಾಗಿರಿ ರಾಜಕಾರಣಕ್ಕೆ ಅಂತ್ಯ ಕಂಡಿದೆ ಎಂದು ತಿಳಿಸಿದ್ದಾರೆ. ಮಮತಾ ಬ್ಯಾನರ್ಜಿ ಅವರ ಆಡಳಿತದ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ.

ಅದೇ ರೀತಿ, ಆಸ್ಸಾಂನಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಗೆಲುವು ಸಾಧಿಸಿರುವುದು ಹಾಗೂ ಪುದುಚೇರಿಯಲ್ಲಿ ಎನ್‌ಡಿಎ ಅಭೂತಪೂರ್ವ ಸಾಧನೆ ಮಾಡಿರುವುದನ್ನು ಅವರು ಮೆಚ್ಚಿದ್ದಾರೆ.

ಒಟ್ಟಾರೆ ಪಂಚರಾಜ್ಯಗಳ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹಿಡಿದಿರುವುದು ಕಾರ್ಯಕರ್ತರ ಅವಿರತ ಶ್ರಮದ ಫಲವಾಗಿದೆ ಎಂದು ಹೇಳಿ, ಪಕ್ಷದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here