spot_img
25.6 C
Udupi
Monday, December 4, 2023
spot_img
spot_img
spot_img

ಪಂಡಿತ್ ದೀನದಯಾಳ್ ಉಪಾಧ್ಯಾಯ ತತ್ವಾದರ್ಶಗಳು ಪಕ್ಷದ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ : ಕುಯಿಲಾಡಿ

‘ಏಕಾತ್ಮ ಮಾನವತಾ ವಾದ’ದ ಪ್ರತಿಪಾದಕರು, ತನ್ನ ಜೀವಿತಾವಧಿಯನ್ನು ತತ್ವನಿಷ್ಠೆಯಿಂದ ದೇಶಕ್ಕಾಗಿ ಸಮರ್ಪಿಸಿಕೊಂಡ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ತತ್ವಾದರ್ಶಗಳು ಪಕ್ಷದ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕಛೇರಿಯಲ್ಲಿ ನಡೆದ ಜನಸಂಘದ ಸಂಸ್ಥಾಪಕರಲ್ಲೊಬ್ಬರಾದ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಪಂಡಿತ್ ಜೀ ಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದರು.

ಅಂದಿನ ನೆಹರೂ ಸರಕಾರ ಕಾಶ್ಮೀರದ ವಿಚಾರದಲ್ಲಿ ತೆಗೆದುಕೊಳ್ಳುತ್ತಿದ್ದ ನಿರ್ಧಾರ ಹಾಗೂ ತುಷ್ಟೀಕರಣ ನೀತಿಯನ್ನು ವಿರೋಧಿಸಿ ನೆಹರೂ ಸಂಪುಟದಿಂದ ನಿರ್ಗಮಿಸಿದ ಡಾ! ಶ್ಯಾಮ ಪ್ರಸಾದ್ ಮುಖರ್ಜಿಯವರು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಪ.ಪೂ. ಗುರೂಜಿಯವರ ಸಹಕಾರದೊಂದಿಗೆ ಪಂಡಿತ್ ದೀನದಯಾಳ್ ಉಪಾಧ್ಯಾಯರ ಸಹಿತ ಸುಂದರ್ ಸಿಂಗ್ ಭಂಡಾರಿ, ಕುಶಭಾವು ಠಾಕ್ರೆ, ಅಟಲ್ ಬಿಹಾರಿ ವಾಜಪೇಯಿ ಹಾಗೂ ಲಾಲ್ ಕೃಷ್ಣ ಆಡ್ವಾಣಿಯವರಂತಹ ಹಿರಿಯರ ಸಮಾಗಮದೊಂದಿಗೆ ಭಾರತೀಯ ಜನಸಂಘದ ಸ್ಥಾಪನೆಗೆ ನಾಂದಿ ಹಾಡಿರುವುದು ಇತಿಹಾಸ. ಬಳಿಕ ಜನತಾ ಪಕ್ಷವಾಗಿ, ಇಂದು ಸಂಸ್ಥಾಪಕ ಹಿರಿಯರ ತ್ಯಾಗ ಬಲಿದಾನದಿಂದ ಭಾರತೀಯ ಜನತಾ ಪಾರ್ಟಿ ವಿಶ್ವದ ಅತೀ ದೊಡ್ಡ ರಾಜಕೀಯ ಪಕ್ಷವೆನಿಸಿರುವುದು ಸಮಸ್ತ ಕಾರ್ಯಕರ್ತರಿಗೆ ಹೆಮ್ಮೆಯ ವಿಚಾರವಾಗಿದೆ.

ಪಂಡಿತ್ ದೀನದಯಾಳ್ ಉಪಾಧ್ಯಾಯರವರು ಓರ್ವ ತತ್ವಜ್ಞಾನಿ, ಮೇಧಾವಿ, ಅರ್ಥಶಾಸ್ತ್ರಜ್ಞ, ಸಮರ್ಥ ಲೇಖಕ ಹಾಗೂ ಆದರ್ಶ ರಾಷ್ಟ್ರ ಸೇವಕರಾಗಿದ್ದರು. ದೇಶ ಸೇವೆಗೆ ಬದ್ಧರಾಗಿರುವ ಯುವಜನ ಸಮುದಾಯ ಹಾಗೂ ಎಲ್ಲ ಪಕ್ಷ-ಪಂಗಡಗಳಿಗೂ ಪಂಡಿತ್ ಜೀ ಯವರ ಮೇರು ವ್ಯಕ್ತಿತ್ವ ಸದಾ ಮಾರ್ಗದರ್ಶಕ. ಅವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ದೇಶ ಮುನ್ನಡೆಯುತ್ತಿರುವ ಹೊಸ ಮನ್ವಂತರದ ಕಾಲಘಟ್ಟದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಯುವ ಜನತೆ ಪಂಡಿತ್ ಜೀ ಯವರ ನಿಸ್ವಾರ್ಥ ಸೇವಾ ಮನೋಭಾವವನ್ನು ಮೈಗೂಡಿಸಿಕೊಂಡು ರಾಷ್ಟ್ರ ಸೇವಾ ಕೈಂಕರ್ಯದಲ್ಲಿ ಇನ್ನಷ್ಟು ಸಕ್ರಿಯವಾಗಿ ತೊಡಗಿಸಿಕೊಳ್ಳುವುದು ಅವರಿಗೆ ನೀಡುವ ನೈಜ ಗೌರವ ಎನಿಸುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಕಿಶೋರ್ ಕುಮಾರ್ ಕುಂದಾಪುರ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗೀತಾಂಜಲಿ ಎಮ್. ಸುವರ್ಣ, ಮಾಜಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಎಸ್.ಟಿ. ಮೋರ್ಚಾ ರಾಜ್ಯ ಕಾರ್ಯದರ್ಶಿ ಉಮೇಶ್ ನಾಯ್ಕ್, ಹಿರಿಯ ಕಾರ್ಯಕರ್ತ ರಮಾಕಾಂತ್ ದೇವಾಡಿಗ, ದ.ಕ. ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿಗಳಾದ ನಳಿನಿ ಪ್ರದೀಪ್ ರಾವ್, ಗುರುಪ್ರಸಾದ್ ಶೆಟ್ಟಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ವಿಜಯಕುಮಾರ್ ಉದ್ಯಾವರ, ಉಡುಪಿ ನಗರಸಭೆ ಮಾಜಿ ಅಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಸುವರ್ದನ್ ನಾಯಕ್, ಜಿಲ್ಲಾ ಪ್ರಬುದ್ದರ ಪ್ರಕೋಷ್ಠದ ಸಂಚಾಲಕ ಪಾಂಡುರಂಗ ಲಗ್ವಂಕರ್, ಜಿಲ್ಲಾ ಪ್ರಕಾಶನ ಪ್ರಕೋಷ್ಠದ ಸಂಚಾಲಕ ದುರ್ಗಾಪ್ರಸಾದ್, ಬಿಜೆಪಿ ಉಡುಪಿ ಗ್ರಾಮಾಂತರ ಪ್ರ.ಕಾರ್ಯದರ್ಶಿ ಸಚಿನ್ ಪೂಜಾರಿ, ಉಡುಪಿ ನಗರ ಪ್ರ.ಕಾರ್ಯದರ್ಶಿ ದಿನೇಶ್ ಅಮೀನ್, ಜಿಲ್ಲಾ ಕಾರ್ಯಾಲಯ ಸಿಬ್ಬಂದಿಗಳಾದ ಶಿವರಾಮ್ ಕಾಡಿಮಾರ್, ಚಂದ್ರಶೇಖರ್ ಪ್ರಭು ಮುಂತಾದವರು ಉಪಸ್ಥಿತರಿದ್ದರು.

Related Articles

Stay Connected

0FansLike
3,912FollowersFollow
0SubscribersSubscribe
- Advertisement -

Latest Articles