Sunday, July 14, 2024
Homeರಾಷ್ಟ್ರೀಯಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆಯಲ್ಲಿ ಭಾಗಿಯಾಗಿದ್ದ ಅರ್ಚಕ ನಿಧನ

ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆಯಲ್ಲಿ ಭಾಗಿಯಾಗಿದ್ದ ಅರ್ಚಕ ನಿಧನ

ಲಕ್ನೊ: ಅಯೋಧ್ಯೆಯಲ್ಲಿ ನಿರ್ಮಾಣವಾದ ನೂತನ ರಾಮಮಂದಿರದ ರಾಮಲಲ್ಲಾನ ಪ್ರಾಣಪ್ರತಿಷ್ಠೆಯಲ್ಲಿ ಭಾಗಿಯಾಗಿದ್ದ ಅರ್ಚಕ ಪಂಡಿತ್‌ ಲಕ್ಷ್ಮೀಕಾಂತ್‌ ದೀಕ್ಷಿತ್‌ ನಿಧನರಾಗಿದ್ದಾರೆ. ಕಾಶಿಯ ಪ್ರಧಾನ ಅರ್ಚಕರೂ ಆಗಿದ್ದ ದೀಕ್ಷಿತ್‌ ಇಂದು ಕೊನೆಯುಸಿರೆಳೆದಿದ್ದಾರೆ.
ಕಾಶಿಯ ಪ್ರಖ್ಯಾತ ವೈದಿಕ ಶ್ರೌತ-ಸ್ಮಾರ್ತ ಸಂಸ್ಕಾರ ತಜ್ಞ ಸಾಂಗ್ವೇದ ವಿದ್ಯಾಲಯದ ಯಜುರ್ವೇದ ಶಿಕ್ಷಕ ಲಕ್ಷ್ಮೀಕಾಂತ ದೀಕ್ಷಿತ್‌ ಅವರ ನಿಧನದಿಂದ ಸನಾತನಿ ಜಗತ್ತು ತುಂಬಲಾರ ನಷ್ಟ ಅನುಭವಿಸಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ದೀಕ್ಷಿತ್‌ ಅವರ ನೇತೃತ್ವದಲ್ಲಿ ಜ. 22ರಂದು ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ಪ್ರತಿಷ್ಠಾಪಿಸಲಾಗಿತ್ತು. 2021ರ ಕಾಶಿ ವಿಶ್ವನಾಥ ಧಾಮದ ಉದ್ಘಾಟನೆಯ ಪೂಜೆಯಲ್ಲೂ ಅವರು ಪಾಲ್ಗೊಂಡಿದ್ದರು.

RELATED ARTICLES
- Advertisment -
Google search engine

Most Popular