ಬಂಟ್ವಾಳ ತಾಲ್ಲೂಕಿನ ಪಾಣೆಮಂಗಳೂರಿನಲ್ಲಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಕ್ರೀಡಾ ಕ್ಷೇತ್ರದ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಬಂಟ್ವಾಳ : ಇಲ್ಲಿನ ಪಾಣೆಮಂಗಳೂರಿನಲ್ಲಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಕ್ರೀಡಾ ಕ್ಷೇತ್ರದ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ದೇವರಾಜ ಅರಸು ಹಿಂದುಳಿದ ವರ್ಗಗಳ ಬಾಲಕಿಯರ ವಿದ್ಯಾಥರ್ಿ ನಿಲಯ ಮೇಲ್ವಿಚಾರಕಿ ಪುಷ್ಪಲತಾ ಮತ್ತು ಬಿಜೆಪಿ ಮಹಿಳಾ ಮೋಚರ್ಾ ಪ್ರಧಾನ ಕಾರ್ಯದರ್ಶಿ ಜಯಶ್ರೀ ಅಶೋಕ್ ಸಾಮೂಹಿಕ ಗೀತಗಾಯನ ಹಾಡಿದರು.
ಇದೇ ವೇಳೆ ಕ್ರೀಡಾ ಕ್ಷೇತ್ರದ ಸಾಧಕರಾದ ಪ್ರತಿಕ್ಷ ಜೋಗಿ, ನಿಸರ್ಗ ಎಸ್. ಬಿ., ತೇಜಸ್ವಿನಿ ಇವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಂಧ್ಯಾ ವೆಂಕಟೇಶ್ ಶುಭ ಹಾರೈಸಿದರು.
ಮಹಿಳಾ ಮೋರ್ಚಾ ಅಧ್ಯಕ್ಷೆ ಸವಿತಾ ಶೆಟ್ಟಿ, ಕಾರ್ಯದರ್ಶಿ ಹರ್ಷರಾಣಿ ಪುಷ್ಪಾನಂದ, ಅಕ್ಷಿತಾ ಜೆ. ಆರ್., ರಜನಿ ಚಿಕ್ಕಿಯಮಠ, ಭವಾನಿ ಶೆಟ್ಟಿ ಮತ್ತಿತರರು ಇದ್ದರು.

