ಪಾಣೆಮಂಗಳೂರು: ಫೆ.1ರಂದು ಅವಿಭಜಿತ ಜಿಲ್ಲಾ ಮಟ್ಟದ ‘ಗಾಣಿಗ ಕ್ರೀಡೋತ್ಸವ’

0
9

ಬಂಟ್ವಾಳ : ಬಂಟ್ವಾಳ ತಾಲ್ಲೂಕು ಗಾಣಿಗರ ಸೇವಾ ಸಂಘ, ಗಾಣಿಗ ಯುವ ವೇದಿಕೆ ಹಾಗೂ ಮಹಿಳಾ ವೇದಿಕೆಗಳ ಸಹಭಾಗಿತ್ವದಲ್ಲಿ ಪಾಣೆಮಂಗಳೂರು ಶಾರದಾ ಪ್ರೌಢಶಾಲೆ ಕ್ರೀಡಾಂಗಣದಲ್ಲಿ ಫೆಬ್ರವರಿ 1ರಂದು ಬೆಳಿಗ್ಗೆ 8.30ರಿಂದ ಅವಿಭಜಿತ ಜಿಲ್ಲಾ ಮಟ್ಟದ ‘ಗಾಣಿಗ ಕ್ರೀಡೋತ್ಸವ’ ನಡೆಯಲಿದೆ ಎಂದು ಯುವ ಗಾಣಿಗರ ಸಂಘದ ಅಧ್ಯಕ್ಷ ಭುವನೇಶ್ ಮೊಗರ್ನಾಡು ತಿಳಿಸಿದ್ದಾರೆ.

ಇಲ್ಲಿನ ಪಾಣೆಮಂಗಳೂರು ಸುಮಂಗಲಾ ಸಭಾಂಗಣದಲ್ಲಿ ಭಾನುವಾರ ಸಂಜೆ ನಡೆದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅಂದು ಬೆಳಿಗ್ಗೆ 8.30ಕ್ಕೆ ಮುಂಬೈ ಗಾಣಿಗ ಸಂಘದ ಅಧ್ಯಕ್ಷ ಶ್ರೀನಿವಾಸ ಪಿ. ಸಪಲ್ಯ ಕ್ರೀಡೋತ್ಸವ ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿ, ಅಶೋಕ್ ಕುಮಾರ್ ರೈ, ಮಾಜಿ ಸಚಿವ ಬಿ. ರಮಾನಾಥ ರೈ, ಮಾಜಿ ಸಭಾಪತಿ ವಿ.ಆರ್. ಸುದರ್ಶನ್, ರಾಜ್ಯ ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್, ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ, ಅಖಿಲ ಕರ್ನಾಟಕ ಗಾಣಿಗ ಸಂಘದ ಅಧ್ಯಕ್ಷ ರಾಜಶೇಖರ ಗಾಣಿಗ, ಉದ್ಯಮಿ ಬಿ. ರಘುನಾಥ ಸೋಮಯಾಜಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

ಗಾಣಿಗರ ಸೇವಾ ಸಂಘದ ಅಧ್ಯಕ್ಷ ಕೃಷ್ಣಪ್ಪ ಗಾಣಿಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷ ನರ್ಸಪ್ಪ ಅಮೀನ್, ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಸೆರ್ಕಳ, ಮಹಿಳಾ ವೇದಿಕೆ ಅಧ್ಯಕ್ಷೆ ಆಶಾ ವೇದವ ಗಾಣಿಗ, ಕೋಶಾಧಿಕಾರಿ ವೇದವ ಗಾಣಿಗ, ಸುಮಂಗಲಾ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ನಾಗೇಶ್ ಕಲ್ಲಡ್ಕ, ನಿವೃತ್ತ ಶಿಕ್ಷಕ ಬಾಲಕೃಷ್ಣ ಮಾಸ್ತರ್, ಕೃಷ್ಣಪ್ಪ ಕೆಮ್ಮನಾಜೆ, ಸಚಿನ್ ಮೆಲ್ಕಾರ್, ನವೀನ್ ಮೊಗರ್ನಾಡು, ಸಂದೀಪ್ ಮಾರ್ನಬೈಲು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here