ಪಾಣೆಮಂಗಳೂರು : ಗಾಣಿಗ ವಿದ್ಯಾರ್ಥಿ ವೇತನ ವಿತರಣೆ

0
10

ಬಂಟ್ವಾಳ : ತಾಲೂಕು ಗಾಣಿಗರ ಸೇವಾ ಸಂಘದ ವತಿಯಿಂದ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಪ್ರೋತ್ಸಾಹಧನ ವಿತರಣೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಆ. 2 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.

ಇದೇ ವೇಳೆ ಪುನರ್ ನವೀಕರಣಗೊಂಡ ‘ ಸುಮಂಗಲಾ ಕಲ್ಯಾಣ ಮಂಟಪ ‘ ಲೋಕಾರ್ಪಣೆ ಗೊಳ್ಳಲಿದೆ. ಮುಂಬೈ ಗಾಣಿಗ ಸಂಘದ ಅಧ್ಯಕ್ಷ ಶ್ರೀನಿವಾಸ್ ಪಿ. ಸಪಲ್ಯ ಸಭಾಂಗಣ ಲೋಕಾರ್ಪಣೆ ಗೊಳಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಯು. ಟಿ. ಖಾದರ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿ, ಬಿ. ಮಂಜುನಾಥ ಭಂಡಾರಿ, ಕಿಶೋರ್ ಕುಮಾರ್ ಬೊಟ್ಯಾಡಿ , ಸಚಿವ ಬಿ. ರಮಾನಾಥ ರೈ, ಗಾಣಿಗ ಅಭಿವೃದ್ಧಿ ನಿಗಮ ಅಧ್ಯಕ್ಷ ಅನಂತ್ ಮೈಸೂರು, ಅಖಿಲ ಕರ್ನಾಟಕ ಗಾಣಿಗ ಸಂಘದ ಅಧ್ಯಕ್ಷ ರಾಜಶೇಖರ್ ಗಾಣಿಗ, ಸಂಘದ ಜಿಲ್ಲಾಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್ ಮತ್ತಿತರ ಗಣ್ಯರು ಭಾಗವಹಿಸುವರು ಎಂದು ಸಂಘದ ಅಧ್ಯಕ್ಷ ಕೃಷ್ಣಪ್ಪ ಗಾಣಿಗ ತಿಳಿಸಿದ್ದಾರೆ.