ಮೂಡುಬಿದಿರೆ: ಹಿಂದು ಜಾಗರಣ ವೇದಿಕೆ, ಮೂಡುಬಿದಿರೆ ತಾಲೂಕು ಘಟಕದ ವತಿಯಿಂದ ಆ. 11ರಂದು ಅಖಂಡ ಭಾರತದ ಸಂಕಲ್ಪ ದಿನದ ಅಂಗವಾಗಿ ಬೃಹತ್ ಪಂಜಿನ ಮೆರವಣಿಗೆ ನಡೆಯಲಿದೆ. ಆ ಪ್ರಯುಕ್ತ ಆ.11ರಂದು ಸಂಜೆ 6.30ರಿಂದ ಸಾವಿರ ಕಂಬದ ಬಸದಿಯಿಂದ ಸಮಾಜ ಮಂದಿರದ ವರೆಗೆ ಪಂಜಿನ ಮೆರವಣಿಗೆ ನಡೆಯಲಿದೆ.
ಮೂಡುಬಿದಿರೆಯ ನ್ಯಾಯವಾದಿ ಶರತ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ಮಂಗಳೂರು ವಿಭಾಗ ಪ್ರಮುಖ್ ಕೇಶವ ಬಂಗೇರ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ಕಾರ್ಯಕ್ರಮ ಸಂಘಟಕರು ತಿಳಿಸಿದ್ದಾರೆ.
ಆ.11ರಂದು ಮೂಡುಬಿದಿರೆಯಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ
RELATED ARTICLES