ಪರಾರಿ – ಕೊಳಲಗಿರಿ ರಸ್ತೆ ತಾತ್ಕಾಲಿಕ ದುರಸ್ತಿ ಆರಂಭ : ತುಳುನಾಡ ರಕ್ಷಣಾ ವೇದಿಕೆ ಮನವಿಗೆ ಸ್ಪಂದನೆ

0
24

ಉಡುಪಿ : ಪರಾರಿ–ಕೊಳಲಗಿರಿ ಸಂಪರ್ಕ ರಸ್ತೆ ತೀವ್ರ ಹದಗೆಟ್ಟ ಪರಿಣಾಮ ವಾಹನ ಸವಾರರು ನಿತ್ಯ ಸಂಕಷ್ಟ ಅನುಭವಿಸುತ್ತಿದ್ದು, ಹಲವು ಅಪಘಾತಗಳು ಸಂಭವಿಸುತ್ತಿದ್ದ ಹಿನ್ನೆಲೆಯಲ್ಲಿ ಇದೀಗ ತಾತ್ಕಾಲಿಕ ದುರಸ್ತಿ ಕಾಮಗಾರಿ ಆರಂಭಿಸಲಾಗಿದೆ.

ಸ್ಥಳೀಯ ಜನರ ಬಹುಕಾಲದ ಬೇಡಿಕೆಗೆ ಸ್ಪಂದಿಸಿದ ಶಾಸಕ ಯಶ್‌ ಪಾಲ್‌ ಸುವರ್ಣ ಅವರ ಶಿಫಾರಸಿನ ಮೇರೆಗೆ ಪಂಚಾಯತ್ ರಾಜ್ ಇಲಾಖೆ ರಸ್ತೆ ದುರಸ್ತಿ ಕಾರ್ಯವನ್ನು ಕೈಗೊಂಡಿದೆ. ರಸ್ತೆ ಗುಂಡಿಗಳಿಂದ ವಾಹನ ಸಂಚಾರ ದುಸ್ತರವಾಗಿದ್ದರಿಂದ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಶೀಘ್ರ ದುರಸ್ತಿಗೆ ಆಗ್ರಹಿಸಿದ್ದರು.

ಈ ಸಂಬಂಧ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ ಅವರ ನೇತೃತ್ವದಲ್ಲಿ ಗ್ರಾಮಸ್ಥರು ಶಾಸಕರ ಗಮನಕ್ಕೆ ಸಮಸ್ಯೆಯನ್ನು ತಂದಿದ್ದರು. ಮನವಿಗೆ ತಕ್ಷಣ ಸ್ಪಂದಿಸಿ ತಾತ್ಕಾಲಿಕ ದುರಸ್ತಿ ಕಾಮಗಾರಿ ಆರಂಭಿಸಿರುವ ಶಾಸಕ ಯಶ್ಪಾಲ್ ಸುವರ್ಣ ಹಾಗೂ ಪಂಚಾಯತ್ ರಾಜ್ ಇಲಾಖೆಗೆ ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here