ಯಾದಗಿರಿ: ಹಠಾತ್ ಸಾವನ್ನಪ್ಪಿರುವ ಯಾದಗಿರಿ ನಗರ ಠಾಣೆ ಪಿಎಸ್‌ಐ ಪರಶುರಾಮ್ ಪತ್ನಿ ಶ್ವೇತಾ ನೀಡಿದ ದೂರಿನನ್ವಯ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು, ಅವರ ಪುತ್ರ ಪಂಪನಗೌಡ (ಸನ್ನಿಗೌಡ) ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ.
ಪಿಎಸ್‌ಐ ಪರಶುರಾಮ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಆದರೆ ಸಾವನ್ನಪ್ಪಿರುವ ಪರಶುರಾಮ್ ಸಾವಿನ ಬಗ್ಗೆ ಅವರ ಪತ್ನಿ ಶ್ವೇತಾ ಅನುಮಾನ ವ್ಯಕ್ತಪಡಿಸಿದ್ದಾರೆ. ಶಾಸಕ ಮತ್ತು ಅವರ ಪುತ್ರ ಪರಶುರಾಮರಿಂದ 30-40 ಲಕ್ಷ ರೂ. ಲಂಚ ಕೇಳಿದ್ದರು. ಇದರಿಂದ ಪರಶುರಾಮ್ ಸಾಲಕ್ಕೆ ಸಿಲುಕಿದ್ದರು ಎಂದು ಶ್ವೇತಾ ಹೇಳಿದ್ದಾರೆ. ಶಾಸಕರು ಹಾಗೂ ಅವರ ಪುತ್ರನ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದ್ದರು. ಗೃಹ ಸಚಿವ ಪರಮೇಶ್ವರ್ ಸೂಚನೆಯ ಮೇರೆಗೆ ಎಫ್‌ಐಆರ್ ದಾಖಲಾಗಿದೆ.
ನಗರದ ಹೊರವಲಯದ ಜಿಲ್ಲಾಸ್ಪತ್ರೆಯಲ್ಲಿ ಮೃತ ಪರಶುರಾಮ್ ಮರಣೋತ್ತರ ಪರೀಕ್ಷೆ ಮಾಡಲಾಯಿತು. ನಂತರ ಕುಟುಂಬಕ್ಕೆ ಶವ ಹಸ್ತಾಂತರಿಸಲಾಗಿದೆ. ಪ್ರಕರಣದ ಹಿನ್ನೆಲೆಯಲ್ಲಿ ಶಾಸಕ ಚನ್ನಾರೆಡ್ಡಿ ಕಚೇರಿಗೆ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.