ಪೋಷಕರೇ ಎಚ್ಚರ: ಗಾಂಜಾ ಮಿಶ್ರಿತ ಜೆಲ್ಲಿ ಚಾಕೊಲೇಟ್ ಪತ್ತೆ..!

0
40

ಬೆಂಗಳೂರು: ನಗರಕ್ಕೆ ಹೊಸ ಮಾದರಿಯ ಜೆಲ್ಲಿ ಗಾಂಜಾ ಎಂಟ್ರಿ ಕೊಟ್ಟಿದೆ. ಜೆಲ್ಲಿ ಚಾಕೊಲೇಟ್​​ನಲ್ಲಿ ಗಾಂಜಾ ಮಿಕ್ಸ್ ಮಾಡಿ ಮಾರಾಟ ಮಾಡಲಾಗುತ್ತಿದ್ದು, ಮೆಡಿಕಲ್ ಹಾಗೂ ಇಂಜಿನಿಯರಿಂಗ್​​ ವಿದ್ಯಾರ್ಥಿಗಳನ್ನು ಟಾರ್ಗೆಟ್​ ಮಾಡಲಾಗುತ್ತಿದೆ. ಈ ಬಗ್ಗೆ ಬ್ಯಾಟರಾಯನಪುರ ಪೊಲೀಸರಿಗೆ ಬಂದ ಮಾಹಿತಿ ಮೇರೆಗೆ ಇದೀಗ ಜೆಲ್ಲಿ ಗಾಂಜಾ ಗ್ಯಾಂಗ್​​ ಅನ್ನು ಬಂಧಿಸಿದ್ದಾರೆ . ಮೊಹಮದ್ ಜಾಹೀದ್ ಹಾಗೂ ಇಸ್ಮಾಯಿಲ್ ಅದ್ನಾನ್ ಬಂಧಿತ ಆರೋಪಿಗಳು. ತಲೆಮರೆಸಿಕೊಂಡ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

ಬ್ಯಾಟರಾಯನಪುರ ಇನ್ಸ್‌ಪೆಕ್ಟರ್ ಕೆ.ಜೀವನ್ ನೇತೃತ್ವದ ತಂಡದಿಂದ ಕಾರ್ಯಾಚರಣೆ ಮಾಡಿದ್ದು, ಒಟ್ಟು ಮೂರು ಲಕ್ಷ ಮೌಲ್ಯದ 1440 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ. ತನಿಖೆ ವೇಳೆ ಗಾಂಜಾದ ಬಟ್ಟಿ ಇಳಿಸಿರುವ ರಸವನ್ನೇ ಜೆಲ್ಲಿ ಚಾಕೊಲೇಟ್ ಜೊತೆ ಬೆರೆಸುತ್ತಿರುವುದು ಪತ್ತೆ ಆಗಿದೆ.

LEAVE A REPLY

Please enter your comment!
Please enter your name here