ಅಮೃತ ಭಾರತಿ ವಿದ್ಯಾಲಯದ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

0
7

ಹೆಬ್ರಿ : ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪೋಷಕರ ಸಭೆ ನಡೆಯಿತು. ಈ ಸಂದರ್ಭದಲ್ಲಿ ಅಮೃತ ಭಾರತಿ ವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ಶೈಲೇಶ್ ಕಿಣಿ ಮಾತನಾಡಿ ಪೋಷಕರು ವಿದ್ಯಾರ್ಥಿಗಳಿಗೆ ಕಲಿಕಾ ಉತ್ತೇಜನ ನೀಡಲು ಅಗತ್ಯವಾದ ವಾತಾವರಣವನ್ನು ಮನೆಯಲ್ಲಿ ನಿರ್ಮಾಣ ಮಾಡಬೇಕು. ಅಂತೆಯೇ ಮೊಬೈಲ್ ಬಳಕೆ ಕಲಿಕಾ ನ್ಯೂನತೆಗೆ ಕಾರಣ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಅಮೃತ ಭಾರತಿ ವಿದ್ಯಾಲಯದ ಮುಖ್ಯ ಶಿಕ್ಷಕಿ ಅಪರ್ಣಾ ಆಚಾರ್, ಉಪ ಮುಖ್ಯಶಿಕ್ಷಕ ಮಹೇಶ್ ಹೈಕಾಡಿ, ಸಂಸ್ಕೃತ ಶಿಕ್ಷಕ ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿ, ಶಿಕ್ಷಕಿ ಸುಚಿತ್ರಾ ಮತ್ತು ಪೋಷಕರು ಉಪಸ್ಥಿತರಿದ್ದರು.