ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಿಭಾಗದ ಪೋಷಕರ ಸಭೆ

0
9

ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ನಡೆಸಲಾಯಿತು.

ಈ ಸಭೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಹಾಜರಾತಿ, ನಡವಳಿಕೆ, ಶಿಸ್ತು ಹಾಗೂ ಮುಂಬರುವ ಪರೀಕ್ಷೆಗಳ ಕುರಿತು ಪೋಷಕರಿಗೆ ಮಾಹಿತಿ ನೀಡಲಾಯಿತು.ಪೋಷಕರು ಮಕ್ಕಳ ಓದಿನ ಬಗ್ಗೆ ಪ್ರತಿದಿನ ಗಮನಹರಿಸುವುದು, ಮೊಬೈಲ್ ಬಳಕೆಯನ್ನು ನಿಯಂತ್ರಿಸುವುದು ಹಾಗೂ ಶಿಕ್ಷಕರೊಂದಿಗೆ ನಿರಂತರ ಸಂಪರ್ಕದಲ್ಲಿರುವಂತೆ ತಿಳಿಸಲಾಯಿತು.

ಪ್ರತ್ಯೇಕ ದಿನಗಳಲ್ಲಿ ನಡೆದ ಪೋಷಕರ ಸಭೆಯಲ್ಲಿ ಆಡಳಿತಮಂಡಳಿಯ ಅಧ್ಯಕ್ಷರು, ನಿರ್ದೇಶಕರುಗಳು , ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.