ಪಠ್ಯದೊಂದಿಗೆ ಸಹಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸಿ ಜೀವನದಲ್ಲಿ ಯಶಸ್ಸು ಗಳಿಸಿ: ಶ್ರೀ ವಿವೇಕ್ ಆಳ್ವ

0
1279


ಮೂಡುಬಿದಿರೆ: ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪಾಡ್ಯಾರು ಇಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಆಳ್ವಾಸ್ ಸಂಸ್ಥೆಯ ಆಡಳಿತ ನಿರ್ದೇಶಕರಾದ ವಿವೇಕ್ ಆಳ್ವ ಸಹಪಠ್ಯ ಚಟುವಟಿಕೆಗಳಲ್ಲಿ ಪಾಲ್ಗೊಂಡಾಗ ಜೀವನದಲ್ಲಿ ಯಶಸ್ಸು ಸಾಧ್ಯವಾಗುತ್ತದೆ. ಎಂಬುದನ್ನು ಹೇಳಿದರು. ಅಧ್ಯಕ್ಷತೆ ವಹಿಸಿದ ಉದ್ಯಮಿ ಶ್ರೀಪತಿ ಭಟ್ 18ರ ನಂಟಿನ ಮೂಡುಬಿದಿರಿಯಲ್ಲಿ 18 ವಿದ್ಯಾರ್ಥಿಗಳಿರುವ ಶಾಲೆಯಲ್ಲಿ ಇಂತಹ ಕಾರ್ಯಕ್ರಮ ನಡೆಸುವುದು ಶ್ಲಾಘನೀಯ ಎಂದರು.

ಕಿರುತೆರೆ ಧಾರವಾಹಿಯ ನಿರ್ದೇಶಕಿ ಅಶ್ವಿನಿ ವಿಜಯ ಕೃಷ್ಣ, ವಿವಿ ಘಟಕ ಕಾಲೇಜಿನ ಸಂಯೋಜಕ ಕುಮಾರ ಸುಬ್ರಹ್ಮಣ್ಯ ಭಟ್, ಗ್ರಾಮ ಪಂಚಾಯತ್ ಸದಸ್ಯ ರಾದ ಟೆಸ್ಲಿನ ಮತ್ತು ರಜನಿ ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ಲಲಿತ ವೇದಿಕೆಯಲ್ಲಿದ್ದರು. ನಿವೃತ್ತ ಶಿಕ್ಷಕರಾದ ವಾಸುದೇವ ಆಚಾರ್ ಸ್ವಾಗತಿಸಿ ಶೋಭಾ ಜೈನ್ ಬಹುಮಾನ ವಿಜೇತರ ವಿವರ ನೀಡಿದರು. ಮಲ್ಲಿಕಾ ಧನ್ಯವಾದ ನೀಡಿದರು. ಪ್ರಜ್ವಲ್ ಮತ್ತು ಪ್ರತಿಭಾ ಸಹಕರಿಸಿದರು. ಮುಖ್ಯ ಶಿಕ್ಷಕ ಪ್ರಸನ್ನ ಶೆಣೈ ಕಾರ್ಯಕ್ರಮ ನಿರ್ವಹಿಸಿದರು. ಈ ಸಂದರ್ಭದಲ್ಲಿ ದಾನಿಗಳನ್ನು ಗೌರವಿಸಲಾಯಿತು, ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here