ಉಡುಪಿ: ಮಕ್ಕಳಿಗೆ ಮನೆಯಲ್ಲಿ ಪಾಲಕರು ಆದರ್ಶಪ್ರಾಯರಾದರೆ ಶಾಲೆಯಲ್ಲಿ ಶಿಕ್ಷಕರೇ ಆದರ್ಶಪ್ರಾಯರಾಗಿರುತ್ತಾರೆ. ದೇಶಕ್ತಿ ಮಕ್ಕಳಲ್ಲಿ ಸದಾ ಜಾಗೃತವಾಗಿರಬೇಕು ಎನ್ನವ ಧ್ಯೇಯದೊಂದಿಗೆ ಹಮ್ಮಿಕೊಂಡಿರುವ ಸಮೂಹ ಗಾಯನ ಸ್ಪರ್ಧೆಯಲ್ಲಿ ಭಾಗವಹಿಸುವ ಆಸಕ್ತಿಯನ್ನು ಉಡುಪಿ ಜಿಲ್ಲೆಯ ವಿವಿಧ ಶಾಲಾ ಮಕ್ಕಳು ತೋರುತ್ತಿರುವುದು ಮೆಚ್ಚಲೇಬೇಕಾದ ಸಂಗತಿ, ಇದರ ಹಿಂದೆ ಶಿಕ್ಷಕರ ಪರಿಶ್ರಮ ಅಪಾರ ಎಂದು ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನ ಸಹಕುಲಾಧಿಪತಿ ಡಾ. ಹೆಚ್.ಎಸ್ ಬಲ್ಲಾಳ್ ಅಭಿಪ್ರಾಯಪಟ್ಟರು.
ಮಣಿಪಾಲ್ ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಮಣಿಪಾಲ್ ಇನ್ಸಿ÷್ಟಟ್ಯೂಟ್ ಆಫ್ ಕಮ್ಯುನಿಕೇಶನ್ ಸಹಯೋಗದಲ್ಲಿ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ಮಣಿಪಾಲ್ ಸ್ವಾತಂತ್ರö್ಯ ಅಮೃತ ಮಹೋತ್ಸವದ ಅಂಗವಾಗಿ ಉಡುಪಿ ಜಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ಆನ್ಲೆöÊನ್ ದೇಶಭಕ್ತಿಗೀತೆಗಳ ಸಮೂಹ ಗಾಯನ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು. ಈ ಸಂದರ್ಭ ಬೆಳ್ಳಿಹಬ್ಬದ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಮಣಿಪಾಲ್ ಇನ್ಸಿ÷್ಟಟ್ಯೂಟ್ ಆಫ್ ಕಮ್ಯುನಿಕೇಶನ್ ಸವಿನೆನಪಿಗಾಗಿ ವಿದ್ಯಾರ್ಥಿಗಳಿಂದಲೇ ರಚಿಸಲ್ಪಟ್ಟ ಬೆಳ್ಳಿಹಬ್ಬದ ವಾರ್ಷಿಕೋತ್ಸವ ಲಾಂಛನವನ್ನು ಡಾ. ಹೆಚ್.ಎಸ್ ಬಲ್ಲಾಳ್ ಬಿಡುಗಡೆ ಮಾಡಿದರು.
ಕಾರ್ಯಕ್ರಮದಲ್ಲಿ ದೇಶಭಕ್ತಿಗೀತೆಗಳ ಸಮೂಹ ಗಾಯನ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳು ದೇಶಭಕ್ತಿಗೀತೆಗಳ ಸಮೂಹ ಗಾಯನವನ್ನು ಮಾಡಿ ರಂಜಿಸಿದರು. ಕಾರ್ಯಕ್ರಮದಲ್ಲಿ ಮಣಿಪಾಲ್ ಇನ್ಸಿ÷್ಟಟ್ಯೂಟ್ ಆಫ್ ಕಮ್ಯುನಿಕೇಶನ್‌ನ ಪ್ರಾಧ್ಯಾಪಕರು ಮತ್ತು ನಿರ್ದೇಶಕರಾದ ಡಾ. ಪದ್ಮಾರಾಣಿ ಹಾಗೂ ಪ್ರಾಧ್ಯಾಪಕರುಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಲೆರಿಸ ನಿರೂಪಿಸಿದರು. ರೇಡಿಯೋ ಮಣಿಪಾಲ್‌ನ ಸಹಾಯಕ ಪ್ರಾಧ್ಯಾಪಕರು ಮತ್ತು ಸಂಯೋಜಕರಾದ ಡಾ.ರಶ್ಮಿ ಅಮ್ಮೆಂಬಳ ವಂದನಾರ್ಪಣೆ ಮಾಡಿದರು.