ಮುಲ್ಕಿ : ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹಳೆಯಂಗಡಿ ಸಮೀಪದ ಪಾವಂಜಿ ಜಂಕ್ಷನ್ ಬಳಿ ಬಸ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪಕ್ಷಿಕೆರೆ ಹೊಸ ಕಾಡು ನಿವಾಸಿ ಗಣೇಶ್ ಹೊಳ್ಳ (70) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತ ಗಣೇಶ್ ಹೊಳ್ಳ ತಮ್ಮ ಕಾರನ್ನು ಪಾವಂಜೆ ದೇವಸ್ಥಾನದ ಹತ್ತಿರ ನಿಲ್ಲಿಸಿ ರಸ್ತೆ ದಾಟುತ್ತಿದ್ದ ಸಂದರ್ಭಹಳೆಯಂಗಡಿ ಕಡೆಯಿಂದ ಬಂದ ಬಸ್ಸು ಡಿಕ್ಕಿ ಹೊಡೆದಿದೆ. ಅಪಘಾತದಿಂದ ಗಣೇಶ್ ಹೊಳ್ಳರು ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯವಾಗಿದ್ದು ಮುಕ್ಕ ಆಸ್ಪತ್ರೆಗೆ ದಾಖಲಾಗಿದ್ದರು.
ಮೃತ ಗಣೇಶ್ ಹೊಳ್ಳ ಪಕ್ಷಿಕೆರೆ ಸಮೀಪದ ಸುರಗಿರಿ ಬ್ರಾಹ್ಮಣ ಸಮಾಜದ ಸಕ್ರಿಯ ಕಾರ್ಯಕರ್ತ ಮತ್ತು ಕಾರ್ಯಕಾರಿ ಸಮಿತಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಅವರು ಪತ್ನಿಯನ್ನು ಅಗಲಿದ್ದಾರೆ.
ಮಂಗಳೂರು ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

