ಉಡುಪಿ: ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕುಂಜಿಬೆಟ್ಟು ಶಾರದಾ ಕಲ್ಯಾಣ ಮಂಟಪದ ಬಳಿಯ ಸುದೀಂದ್ರ ತೀರ್ಥ ರಸ್ತೆ ಕ್ರಾಸ್ ಬಳಿ ಸಂಭವಿಸಿದೆ.
ಮೃತರನ್ನು ಮುರಾರಿ ಪುತ್ತಿಗೆ ಎಂದು ಗುರುತಿಸಲಾಗಿದೆ. ಇವರು ಶಾರದ ಕಲ್ಯಾಣ ಮಂಟಪದ ಕಡೆಯಿಂದ ಬೀಡಿನಗುಡ್ಡೆ ಕಡೆ ಹೋಗುವ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು.
ಈ ವೇಳೆ ಅಪರಿಚಿತ ವಾಹನವೊಂದು ಮುರಾರಿ ಪುತ್ತಿಗೆ ಎಂಬವರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದು ಬಂದಿದೆ.
ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.