ಮೂಲ್ಕಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಭಾಗವಹಿಸುವುದು ನಮ್ಮೆಲ್ಲರ ಸುಯೋಗಯಾಗಿದ್ದು, ಕಾರ್ಯಕ್ರಮದಲ್ಲಿ ಊರ ಪರವೂರ ಎಲ್ಲಾ ಭಕ್ತರು ಭಾಗವಹಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕು ಎಂದು ಪೇಜಾವರ ಮಠದ ಶ್ರೀಗಳಾದ ಶ್ರೀ ವಿಶ್ವಪ್ರಸನ್ನ ತೀರ್ಥರು ಹೇಳಿದರು. ಮೂಲ್ಕಿ ಸೀಮೆಯ ಪುನರೂರು ಶ್ರೀವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಕ್ಷೇತ್ರದ ಜೀರ್ಣೋದ್ಧಾರ ದ ಬಗ್ಗೆ ನಡೆದ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು. ಸಭೆಯಲ್ಲಿ ಕಟೀಲು ಕ್ಷೇತ್ರದ ಅರ್ಚಕ ಲಕ್ಷ್ಮೀನಾರಾಯಣ ಅಸ್ರಣ್ಣ, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಕಿನ್ನಿಗೋಳಿ ಯುಗಪುರುಷದ ಭುವನಾಭಿರಾಮ ಉಡುಪ, ಕ್ಷೇತ್ರದ ಆಡಳಿತ ಮೊಕ್ತೇಸರ ಪಟೇಲ್ ವಾಸುದೇವರಾವ್, ಪುರಂದರ ಶೆಟ್ಟಿಗಾರ್, ವಿಪ್ರ ಸಂಪದ ಅಧ್ಯಕ್ಷ ಸುಧಾಕರ್ ರಾವ್ ಪುನರೂರು ಉಪಸ್ಥಿತರಿದ್ದರು.