ದಾವಣಗೆರೆ-ಜುಲೈ, ದಾವಣಗೆರೆಯ ಸವಿಡೈನ್ ಮಹೇಶ್ ಶೆಟ್ಟಿ ಗೆಳೆಯರ ಬಳಗ ಮತ್ತು ಕರಾವಳಿ ಮಿತ್ರ
ಮಂಡಳಿಯ ಸಂಯುಕ್ತಾಶ್ರಯದಲ್ಲಿ ಜುಲೈ 7 ರಂದು ಭಾನುವಾರ ಸಂಜೆ 7 ಗಂಟೆಗೆ ನಗರದ ವಿದ್ಯಾನಗರ ರಸ್ತೆಯ ದೃಶ್ಯ ಕಲಾ ಮಹಾವಿದ್ಯಾಲಯದ ಬಯಲು ರಂಗ ಮಂದಿರದಲ್ಲಿ ಉಡುಪಿ ಜಿಲ್ಲೆಯ ಮಂದರ್ತಿಯ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿಯ ನಾಡಿನ ಖ್ಯಾತ ಯಕ್ಷಗಾನ ಕಲಾವಿದರಿಂದ “ಮಹಾಶಕ್ತಿ ವೀರಭದ್ರ” ಪ್ರಸಂಗ (ಕಥಾನಕ)ದ ಯಕ್ಷಗಾನ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ನಗರದ ಸವಿಡೈನ್ ಮಹೇಶ್ ಶೆಟ್ಟಿ ಗೆಳೆಯರ ಬಳಗದ ಮುಖ್ಯಸ್ಥರಾದ ಮಹೇಶ್ ಶೆಟ್ಟಿ ತಿಳಿಸಿದ್ದಾರೆ.
ಕರ್ನಾಟಕ ಕರಾವಳಿ ಜಿಲ್ಲೆಗಳ ವಿಶ್ವವಿಖ್ಯಾತ ಅಪ್ಪಟ ಕನ್ನಡದ ಆರಾಧನಾ ಕಲೆಯ ಈ ಯಕ್ಷಗಾನ ಪ್ರದರ್ಶನ ಉಚಿತ ಪ್ರವೇಶವಾಕಾಶವಿದ್ದು ಈ ಅಪರೂಪದ ವೈಶಿಷ್ಠಪೂರ್ಣ ದೈವದ ಅಭೂತಪೂರ್ವ ಯಕ್ಷಗಾನ ಪ್ರದರ್ಶನಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕೆಂದು ಕರಾವಳಿ ಮಿತ್ರ ಮಂಡಳಿಯ ಗೌರವ ಸಲಹೆಗಾರರಾದ ಸಾಲಿಗ್ರಾಮ ಗಣೇಶ್‌ಶೆಣೈ ವಿನಂತಿಸಿದ್ದಾರೆ.