ದಿವ್ಯಾಂಗರ ಸೇವೆಗಳನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ‘ಯುಡಿಐಡಿ (UDID) ಕಾರ್ಡ್ ಸೇವಾ ಸಪ್ತಾಹ’ ಕಾರ್ಯಕ್ರಮವನ್ನು ಆಯೋಜಿಸಬೇಕು ಹಾಗೂ ದಿವ್ಯಾಂಗ ಫಲಾನುಭವಿಗಳಿಗೆ ಪ್ರತಿ ತಿಂಗಳು ಸಿಗಬೇಕಾದ ಮಾಸಿಕ ಭತ್ಯೆಯನ್ನು ಯಾವುದೇ ವಿಳಂಬವಿಲ್ಲದೆ ತಕ್ಷಣವೇ ವಿತರಿಸಬೇಕು ಎಂದು ಜಿಲ್ಲಾ ವಿಕಲಚೇತನ ಕಲ್ಯಾಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಮಾಸಿಕ ಭತ್ಯೆ ವಿಳಂಬವಾಗುವುದರಿಂದ ದಿವ್ಯಾಂಗರು ತಮಗೆ ದಿನನಿತ್ಯ ಬೇಕಾಗುವ ಅಗತ್ಯ ಔಷಧಿಗಳನ್ನು ಖರೀದಿಸಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಮಾನವೀಯ ದೃಷ್ಟಿಯಿಂದ ಈ ಕೂಡಲೇ ಭತ್ಯೆ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಕೆ ವಿಜಯ ಕೊಡವೂರು ಹಾಗೂ ನಾಗರಿಕರು ಅಧಿಕಾರಿಗಳಿಗೆ ಮನವಿ ನೀಡಿದರು.

