ಬೆಳ್ತಂಗಡಿ: ತಾಲೂಕಿನ 16 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇರುವ ಕನ್ನಡ ಇತರೆ ಮಾಧ್ಯಮದ ಜೊತೆಗೆ ಆಂಗ್ಲಮಾಧ್ಯಮ (ದ್ವಿ ಭಾಷಾ) ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿ ಆದೇಶ ಹೊರಡಿಸಿದೆ,
ಈ ಕುರಿತಂತೆ ಶಾಲಾ ಇಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಸರ್ಕಾರಿ ಶಾಲೆಗಳಲ್ಲಿ 1ನೇ ತರಗತಿಯಿಂದ ಹಾಲಿ ಇರುವ ಕನ್ನಡ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ) ತರಗತಿಯನ್ನು ಕೆಲವು ಷರತ್ತುಗಳೊಂದಿಗೆ ಪ್ರಾರಂಭಿಸಲು ಅನುಮತಿ ನೀಡಿ ಆದೇಶಿಸಲಾಗಿರುತ್ತದೆ ಎಂದಿದ್ದಾರೆ.