“ಮನುಷ್ಯನಲ್ಲಿರುವ ಪರಿಪೂರ್ಣತೆಯನ್ನು ಹೊರತರುವುದೇ ನಿಜವಾದ ಶಿಕ್ಷಣ” ಎಂದು ಸ್ವಾಮಿ ವಿವೇಕಾನಂದರು ಹೇಳಿದರು. ಶಿಕ್ಷಣವೆಂದರೆ ಕೇವಲ ಪುಸ್ತಕಗಳ ಕಲಿಕೆಯಲ್ಲ ಅದು ಮಾನವನ ಸರ್ವತೋಮಖ ಬೆಳವಣಿಗೆಗೆ ಸಹಕಾರಿಯಾಗಬೇಕು ಎಂಬುದು ಸ್ವಾಮಿ ವಿವೇಕಾನಂದರ ಆಶಯ. ಈ ಆಶಯದಂತೆ ಮಂಗಳೂರಿನ ರಾಮಕೃಷ್ಣ ಮಠವು ವಿವಿಧ ಚಟುವಟಿಕೆಗಳನ್ನು ನಡೆಸುತ್ತಾ ಬಂದಿದೆ.
ಈ ಹಿನ್ನಲೆಯಲ್ಲಿ ಮಂಗಳೂರಿನ ರಾಮಕೃಷ್ಣ ಮಠವು ಮಕ್ಕಳಿಗಾಗಿ ವ್ಯಕ್ತಿತ್ವ ವಿಕಸನ ಶಿಬಿರವನ್ನು ಆಯೋಜಿಸುತ್ತಿದೆ. ಈ ಶಿಬಿರವು ಏಪ್ರಿಲ್ ೧೦ ರಿಂದ ಪ್ರಾರಂಭವಾಗಲಿದ್ದು ಏಪ್ರಿಲ್ ೨೫ ರ ವರೆಗೆ ಬೆಳಗ್ಗೆ ೮.೩೦ ರಿಂದ ಮಧ್ಯಾಹ್ನ ೧೨ ಗಂಟೆಯ ವರೆಗೆ ಮಂಗಳೂರು ರಾಮಕೃಷ್ಣ ಮಠದಲ್ಲಿ ನಡೆಯಲಿದೆ. ಈ ಶಿಬಿರದಲ್ಲಿ ಮಕ್ಕಳಿಗೆ ಪ್ರಾಣಾಯಾಮ, ಧ್ಯಾನ, ಭಗವದ್ಗೀತೆ, ರಸಪ್ರಶ್ನೆ, ಭಕ್ತಿಗೀತೆ, ಚಿತ್ರಕಲೆ, ಕರಕುಶಲ ಕಲೆ, ಕರಾಟೆ, ಯೋಗಾಸನ, ಟೈಲರಿಂಗ್ ತರಬೇತಿ, ಚೆಸ್, ಇತ್ಯಾದಿಗಳನ್ನು ಕಲಿಯಲು ಅವಕಾಶವಿದೆ. ಇದರ ಜೊತೆಗೆ ವಿವಿಧ ಚಟುವಟಿಕೆಗಳೊಂದಿಗೆ ಉತ್ತಮ ವಾತಾವರಣದಲ್ಲಿ ಈ ಶಿಬಿರವು ನಡೆಯಲಿದೆ. ೪ ರಿಂದ ೧೭ನೇ ವಯಸ್ಸಿನ ಮಕ್ಕಳಿಗೆೆ ಈ ಶಿಬಿರದಲ್ಲಿ ಭಾಗವಹಿಸಲು ಅವಕಾಶವಿದ್ದು, ಶಿಬಿರಕ್ಕೆ ಪ್ರವೇಶ ಪಡೆಯಲು ಏಪ್ರಿಲ್ ೮ ಕೊನೆಯ ದಿನಾಂಕವಾಗಿರುತ್ತದೆ. ವಿದ್ಯಾರ್ಥಿಗಳು ಮಠದ ಕಾರ್ಯಾಲಯದಲ್ಲಿ ತಮ್ಮ ಹೆಸರನ್ನು ನ್ನೊಂದಾಯಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮಠದ ಕಾರ್ಯಾಲಯ ದೂರವಾಣಿ ಸಂಖ್ಯೆ ೦೮೨೪-೨೪೧೪೪೧೨ ಸಂಪರ್ಕಿಸಬಹುದು.