ಸಾರ್ವಜನಿಕ ಶೌಚಾಲಯದ ಬಳಿ ಕಸದ ರಾಶಿ: ದುರ್ವಾಸನೆಯಿಂದ ಜನರಿಗೆ ತೊಂದರೆ

0
68

ಉಡುಪಿ : ನಗರದ ನಾರ್ತ್ ಶಾಲೆಯಿಂದ ಶ್ರೀಕೃಷ್ಣ ಮಠದ ರಾಜಾಂಗಣಕ್ಕೆ ಸಂಪರ್ಕಿಸುವ ರಸ್ತೆಯ ಸಮೀಪದಲ್ಲಿರುವ ನಗರಸಭೆಯ ಸಾರ್ವಜನಿಕ ಶೌಚಾಲಯದ ಬಳಿ ಹಲವು ದಿನಗಳಿಂದ ಕಸ-ತ್ಯಾಜ್ಯಗಳನ್ನು ಸಂಗ್ರಹಿಸಿಟ್ಟಿರುವುದರಿಂದ ಪರಿಸರದಲ್ಲಿ ತೀವ್ರ ದುರ್ವಾಸನೆ ಹರಡುತ್ತಿದೆ

ಈ ರಸ್ತೆಯ ಮೂಲಕ ಪ್ರತಿನಿತ್ಯ ಶ್ರೀಕೃಷ್ಣ ಮಠಕ್ಕೆ ಯಾತ್ರಿಕರು ಸಂಚರಿಸುತ್ತಿದ್ದು, ಸಮೀಪದಲ್ಲೇ ಶಾಲೆಯೂ ಇದೆ. ಕಸದ ರಾಶಿಯಿಂದಾಗಿ ವಿದ್ಯಾರ್ಥಿಗಳು, ಸ್ಥಳೀಯ ನಿವಾಸಿಗಳು ಹಾಗೂ ಯಾತ್ರಿಕರು ಮೂಗು ಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಪರಿಸರದ ಸ್ವಚ್ಛತೆ ಹಾಗೂ ಸಾರ್ವಜನಿಕರ ಆರೋಗ್ಯದ ಬಗ್ಗೆಯೂ ಆತಂಕ ವ್ಯಕ್ತವಾಗಿದೆ.

ಸಂಬಂಧಪಟ್ಟ ನಗರಸಭೆಯ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ, ಕಸದ ರಾಶಿಯನ್ನು ತೆರವುಗೊಳಿಸಿ ಪರಿಸರವನ್ನು ಸ್ವಚ್ಛಗೊಳಿಸಬೇಕು. ಇನ್ನು ಮುಂದೆ ಈ ಪ್ರದೇಶದಲ್ಲಿ ಕಸ ಸಂಗ್ರಹವಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ನಗರಸಭೆಯ ಮಾಜಿ ಸದಸ್ಯ ನಿತ್ಯಾನಂದ ಒಳಕಾಡುವರು ಆಗ್ರಹಿಸಿದ್ದಾರೆ.