ಮಂಚಕಲ್ಲು: ಶಾಲೆ, ಉಚಿತ ಬ್ಯಾಗ್, ಕೊಡೆ ವಿತರಣೆ

0
154


ಬಂಟ್ವಾಳ: ಶಾಲೆಗಳಲ್ಲಿ ಬಾಲ್ಯದಿಂದಲೇ ಮಕ್ಕಳಿಗೆ ಗುಣಮಟ್ಟ ಮತ್ತು ಸಂಸ್ಕಾರಯುತ ಶಿಕ್ಷಣ ದೊರೆತಾಗ ಭವಿಷ್ಯದಲ್ಲಿ ಅತ್ಯುತ್ತಮ ಪ್ರಜೆಯಾಗಿ ರೂಪುಗೊಳ್ಳಲು ಸಾಧ್ಯವಿದೆ. ಇದಕ್ಕಾಗಿ ಸರಕಾರದ ಜೊತೆಗೆ ಶಿಕ್ಷಕರು ಮತ್ತು ಮಕ್ಕಳ ಪೋಷಕರು ಶಾಲೆಗೆ ಮೂಲಭೂತ ಸೌಕರ್ಯ ಒದಗಿಸಿ ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡುವ ಅಗತ್ಯವಿದೆ ಎಂದು ವಕೀಲೆ ಶೋಭಲತಾ ಸುವರ್ಣ ಹೇಳಿದ್ದಾರೆ.
ಇಲ್ಲಿನ ಸಿದ್ಧಕಟ್ಟೆ ಸಮೀಪದ ಮಂಚಕಲ್ಲು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ಮತ್ತು ಕೊಡೆ ವಿತರಿಸಿ ಅವರು ಮಾತನಾಡಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಶೈಲಜಾ ಗಣೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಸುಮಲತಾ ಮೋಹನ್, ವಕೀಲೆ ಮಮತಾ ನಾಯಕ್ ಶುಭ ಹಾರೈಸಿದರು. ಶಿಕ್ಷಕಿಯರಾದ ಪವಿತ್ರಾ ಜೈನ್, ಭವಾನಿ ಮಹೇಶ್, ಪ್ರಮುಖರಾದ ಜಿ.ಸುರೇಶ್ ಸಾಲ್ಯಾನ್, ರಶಿಕಾ ಪಂಜಿಕಲ್ಲು, ದಿವ್ಯಲತಾ ಸುರೇಶ್ ದಾಸ್, ಜಯಶ್ರೀ ದೇವರಾಜ್ ಮತ್ತಿತರರು ಇದ್ದರು. ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಕಾರ್ಯದರ್ಶಿ ಮೋಹನ್ ಕೆ.ಶ್ರೀಯಾನ್ ರಾಯಿ ಸ್ವಾಗತಿಸಿ, ಮುಖ್ಯಶಿಕ್ಷಕಿ ವಿನಿತಾ ಅರ್ಕಳ ವಂದಿಸಿದರು.

LEAVE A REPLY

Please enter your comment!
Please enter your name here