ಬಂಟ್ವಾಳ: ಇಲ್ಲಿನ ವಗ್ಗ ರಾಷ್ಟ್ರೀಯ ಹೆದ್ದಾರಿ ಸಮೀಪದ ಕಾಡಬೆಟ್ಟು ಗ್ರಾಮದ ಪಿಲಿಂಗಾಲು ಶ್ರೀ ಗಾಯತ್ರೀ ದೇವಿ ದೇವಸ್ಥಾನದಲ್ಲಿ ಮಾ.30ರಿಂದ 31ರತನಕ 19ನೇ ವರ್ಷದ ಪ್ರತಿಷ್ಠಾ ವರ್ಧಂತಿ ಉತ್ಸವ ಮತ್ತು 51ನೇ ವರ್ಷದ ಭಜನಾ ಮಂಗಲೋತ್ಸವ ಹಾಗೂ ಅಣ್ಣಪ್ಪ ಪಂಜುರ್ಲಿ ನೇಮೋತ್ಸವ ನಡೆಯಲಿದೆ.
ಮಾ.30ರಂದು ಬೆಳಿಗ್ಗೆ ಗಂಟೆ 7.30 ರಿಂದ ಶ್ರೀ ಮಹಾಗಣಪತಿ, ಶ್ರೀ ಗುರು ರಾಘವೇಂದ್ರ ಮತ್ತು ಶ್ರೀ ಗಾಯತ್ರೀ ದೇವಿಗೆ ಪಂಚಾಮೃತ ಅಭಿಷೇಕ, ಪುರಸ್ಸರ ನವಕ ಪ್ರಧಾನ ಕಲಶಾಭಿಷೇಕ, 11 ಗಂಟೆಗೆ ಆಶ್ಲೇಷಾ ಬಲಿ ಮತ್ತು ನಾಗತಂಬಿಲ, ಕಾಲ ರಕ್ತೇಶ್ವರಿಗೆ ಪರ್ವ, ಮಧ್ಯಾಹ್ನ ಗಂಟೆ 12.30ರಿಂದ ಮಹಾಪೂಜೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.
ಅಂದು ಸಂಜೆ 7 ಗಂಟೆಗೆ ಭಜನಾ ಮಂಗಲೋತ್ಸವ ಆರಂಭ, ರಾತ್ರಿ 9 ಗಂಟೆಗೆ ಮಹಾಪೂಜೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಮಾ.31ರಂದು ಬೆಳಿಗ್ಗೆ 8 ಗಂಟೆಗೆ ‘ಗಣಯಾಗ’ ಮತ್ತು ‘ಗಾಯತ್ರೀ ಯಾಗ’ ನಡೆಯಲಿದ್ದು, 10.30 ಗಂಟೆಗೆ ರಕ್ತೇಶ್ವರಿ, ಮಹಿಷಂದಾಯ, ಅಣ್ಣಪ್ಪ ಪಂಜುರ್ಲಿ ದೈವಕ್ಕೆ ಪರ್ವ, 11 ಗಂಟೆಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, 1 ಗಂಟೆಗೆ ಮಹಾಪೂಜೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಅಂದು ಸಂಜೆ 6 ಗಂಟೆಗೆ ಭಜನೆ ಮತ್ತು ರಾತ್ರಿ 8 ಗಂಟೆಗೆ ರಂಗಪೂಜೆ , ಮಹಾಪೂಜೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 9 ಗಂಟೆಗೆ ಅಣ್ಣಪ್ಪ ಪಂಜುರ್ಲಿ ದೈವದ ನೇಮೋತ್ಸವ ನಡೆಯಲಿದೆ ಎಂದು ದೇವಳದ ಆಡಳಿತ ಧರ್ಮದರ್ಶಿ ಕೆ.ಎಸ್.ಪಂಡಿತ್ ತಿಳಿಸಿದ್ದಾರೆ.
ಬಂಟ್ವಾಳ ತಾಲ್ಲೂಕಿನ ಕಾಡಬೆಟ್ಟು ಗ್ರಾಮದ ಪಿಲಿಂಗಾಲು ಶ್ರೀ ಗಾಯತ್ರೀ ದೇವಿ ದೇವಸ್ಥಾನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ ವಿಪತ್ತು ನಿರ್ವಹಣಾ ಘಟಕ ವತಿಯಿಂದ ಶ್ರಮದಾನ ಸೇವೆ ನಡೆಸಿದರು.