ಬೆಳ್ತಂಗಡಿ: ಗ್ರಾಮೀಣ ಪ್ರದೇಶದ ಮಕ್ಕಳು ಕೂಡ ಆಂಗ್ಲ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಪಡೆಯಬೇಕು ಎಂಬ ಉದ್ದೇಶದಿಂದ ಜನಾಬ್ ನಸೀರ್ ಅಹಮದ್ ಖಾನ್ ಅಳದಂಗಡಿ ಪಿಲ್ಯ ಗ್ರಾಮದಲ್ಲಿ ಪ್ರಾರಂಭಿಸಿದ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆ ಇದೀಗ ರಜತ ಮಹೋತ್ಸವದ ಸಂಭ್ರಮಾಚರಣೆಯಲ್ಲಿದೆ.
ಗುಣಮಟ್ಟದ ಶಿಕ್ಷಣ ನೀಡುತ್ತಾ ಬರುತ್ತಿರುವ ಈ ಶಿಕ್ಷಣ ಸಂಸ್ಥೆಯು ಎಸ್‌ಎಸ್‌ಎಲ್‌ಸಿ ವಿಭಾಗದಲ್ಲಿ ಸತತವಾಗಿ ಉತ್ತಮ ಫಲಿತಾಂಶವನ್ನು ಪಡೆಯುತ್ತಾ ಬಂದಿರುತ್ತದೆ. ಇದೀಗ ಜ. 2ರಂದು ರಜತಮಹೋತ್ಸವ ಕಾರ್ಯಕ್ರಮ ನಡೆಯಲಿದ್ದು ಪೂರ್ವಾಹ್ನ ಸಮಯ 9:30ಕ್ಕೆ ಸರಿಯಾಗಿ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಶಾಲಾ ಸಂಚಾಲಕರಾದ ಜನಾಬ್ ನಸೀರ್ ಅಹಮದ್ ಖಾನ್ ಅಧ್ಯಕ್ಷತೆ ವಹಿಸಲಿದ್ದಾರೆ, ವೇಣೂರು ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಶ್ರೀಶೈಲ ಡಿ. ಮುರಗೋಡು ಉದ್ಘಾಟನೆ ನೆರವೇರಿಸಲಿದ್ದಾರೆ ಹಾಗೂ ಧ್ವಜಾರೋಹಣವನ್ನು ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಮಾಡಲಿದ್ದಾರೆ ಉಳಿದಂತೆ ವಿವಿಧ ಗಣ್ಯಾತಿಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಸಂಜೆ ಸಮಯ 5ಗಂಟೆಗೆ ಸರಿಯಾಗಿ ಸಮಾರೋಪ ಸಮಾರಂಭ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಕರ್ನಾಟಕ ಸರಕಾರದ ವಿಧಾನ ಸಭಾಧ್ಯಕ್ಷ ಯುಟಿ ಖಾದರ್ ಉಪಸ್ಥಿತಿಯೊಂದಿಗೆ ನಡೆಯಲಿರುವ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜಾ ನೆರವೇರಿಸಲಿದ್ದಾರೆ. ವಿಶೇಷ ಸನ್ಮಾನಿತರಾಗಿ ತುಳು ಚಲನಚಿತ್ರ ನಟ ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್ ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೆಕಳ ಹಾಜಬ್ಬ ಆಗಮಿಸಲಿದ್ದು, ವಿಧಾನ ಪರಿಷತ್ ಸದಸ್ಯರಾದ ಎಸ್ ಎಲ್ ಭೋಜೇಗೌಡ, ಸುಮಂತ್ ಕುಮಾರ್ ಜೈನ್ ಎಕ್ಸೆಲ್ ಪದವಿ ಪೂರ್ವ ಕಾಲೇಜು, ಉದ್ಯಮಿ ಶಶೀಧರ ಶೆಟ್ಟಿ ಬರೋಡ, ಪ್ರೊ ಅಲೆಕ್ಸ್ ಐವನ್ ಸಿಕ್ವೇರಾ, ತಾರಕೇಸರಿ ಕ್ಷೇತ್ರ ಶಿಕ್ಷಣಾಧಿಕಾರಿ, ಶಿವಪ್ರಸಾದ್ ಅಜಿಲರು ಭಾಗವಹಿಸಲಿದ್ದು ಗೌರವ ಉಪಸ್ಥಿತಿಯಲ್ಲಿ ಡಾ.ಜಯಕೀರ್ತಿ ಜೈನ್ ಅಧ್ಯಕ್ಷರು ರಾಜ್ಯ ಸರಕಾರಿ ನೌಕರರ ಸಹಕಾರ ಸಂಘ, ಜನಾಬ್ ಅಬ್ದುಲ್ ರಶೀದ್ ಮತ್ತು ಎಂ.ಕೆ. ಪ್ರಸಾದ್ ಉಪಸ್ಥಿತರಿರಲಿದ್ದಾರೆ ಎಂದು ಶಾಲಾ ಶಿಕ್ಷಕ ರಕ್ಷಕ ಮತ್ತು ರಜತ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಶಾಜಿ ಕೆ ಕುರಿಯನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.