ನವದೆಹಲಿ: ಇಂದು ಇಂಡಿಯಾ ಮೈತ್ರಿಕೂಟದ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ ಎಂದು ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ. ಇಂಡಿಯಾ ಒಕ್ಕೂಟ ರಚನೆಯಾದ ದಿನವೇ ದೇಶದಲ್ಲಿ ಸರ್ವಾಧಿಕಾರ ಅಂತ್ಯಗೊಳಿಸಿ, ಸಂವಿಧಾನ ಉಳಿಸಬೇಕೆಂದು ನಾವು ನಿರ್ಧರಿಸಿದ್ದೆವು. ಇಂದು ನಾವು ಪ್ರಧಾನಿ ಅಭ್ಯರ್ಥಿಯನ್ನು ನಿರ್ಧರಿಸುತ್ತೇವೆ. ಎಲ್ಲಾ ದೇಶಭಕ್ತರು ಮತ್ತು ಬಿಜೆಪಿಯಿಂದ ಕಿರುಕುಳಕ್ಕೊಳಗಾದವರೆಲ್ಲರೂ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಚಂದ್ರಬಾಬು ನಾಯ್ಡು ಕೂಡ ಬಿಜೆಪಿಯಿಂದ ಕಿರುಕುಳಕ್ಕೊಳಗಾದವರು ಎಂದು ಅವರು ಹೇಳಿದ್ದಾರೆ.
ಇಂಡಿಯಾ ಒಕ್ಕೂಟ ಮಹಾರಾಷ್ಟ್ರ ಮತ್ತು ರಾಷ್ಟ್ರಾದ್ಯಂತ ಉತ್ತಮ ಕೆಲಸ ಮಾಡಿದೆ. ನಮ್ಮ ದೇಶದಲ್ಲಿ ದುರಹಂಕಾರಕ್ಕೆ ಸ್ಥಾನವಿಲ್ಲ ಎಂದು ನಾವು ತೋರಿಸಿಕೊಟ್ಟಿದ್ದೇವೆ. ಸಂವಿಧಾನ ವಿರೋಧಿ ಶಕ್ತಿಗಳು, ಪ್ರಜಾಪ್ರಭುತ್ವ ವಿರೋಧಿ ಶಕ್ತಿಗಳಿಗೆ ದೇಶದಲ್ಲಿ ಸ್ಥಾನವಿಲ್ಲ ಎಂದು ಅವರು ಹೇಳಿದ್ದಾರೆ.