ನವದೆಹಲಿ: ಕೆನಡಾದ ಹಿಂದೂ ದೇವಾಲಯದ ಮೇಲೆ ಉದ್ದೇಶಪೂರ್ವಕ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ.
ಳೆದ ವಾರ ಒಂಟಾರಿಯೊದ ಬ್ರಾಂಪ್ಟನ್‌ನಲ್ಲಿ ಹಿಂದೂ ದೇವಾಲಯದ ಮೇಲೆ ಕೆಲವರು ದಾಳಿ ನಡೆಸಿದ್ದರು.
ಆ ದೇಶದಲ್ಲಿನ ಭಾರತೀಯ ರಾಜತಾಂತ್ರಿಕರನ್ನು ಬೆದರಿಸುವ ಹೇಡಿತನದ ಪ್ರಯತ್ನಗಳು ನಡೆಯುತ್ತಿವೆ ಎಂದು ಪ್ರಧಾನಿ ಟೀಕಿಸಿದ್ದಾರೆ. ಇಂತಹ ಹಿಂಸಾಚಾರಗಳು ಭಾರತದ ಸಂಕಲ್ಪವನ್ನು ಎಂದಿಗೂ ದುರ್ಬಲಗೊಳಿಸುವುದಿಲ್ಲ. ಕೆನಡಾದ ಸರ್ಕಾರವು ನ್ಯಾಯವನ್ನು ಖಚಿತಪಡಿಸುತ್ತದೆ ಮತ್ತು ಕಾನೂನಿನ ನಿಯಮವನ್ನು ಎತ್ತಿಹಿಡಿಯುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ತಿಳಿಸಿದ್ದಾರೆ.
ಭಾರತ ಸರ್ಕಾರವು, ಉಗ್ರವಾದಿಗಳು ಮತ್ತು ಪ್ರತ್ಯೇಕತಾವಾದಿಗಳು ನಡೆಸಿದ ಹಿಂಸಾಚಾರದ ಕೃತ್ಯಗಳನ್ನು ಖಂಡಿಸುತ್ತದೆ ಎಂದು ವಿದೇಶಾಂಗ ಸಚಿವಾಲಯವು ಟೀಕಿಸಿತ್ತು. ಅದರ ಬೆನ್ನಲ್ಲೇ, ಪ್ರಧಾನಿಯವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ. ಎಲ್ಲಾ ಪೂಜಾ ಸ್ಥಳಗಳನ್ನು ಸಮರ್ಪಕವಾಗಿ ರಕ್ಷಿಸಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಕೆನಡಾ ಆಡಳಿತ ವ್ಯವಸ್ಥೆಗೆ ಒತ್ತಾಯಿಸಿದ್ದಾರೆ.