ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸಿದ್ದ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ದೇಶದಲ್ಲೇ ಅತ್ಯಧಿಕ ಲೀಡ್ ಪಡೆಯಲಿದೆ ಎಂದು ನಿರೀಕ್ಷಿಸಲಾಗಿದ್ದ ಪ್ರಧಾನಿ ಮೋದಿಯವರೇ ಸ್ಪರ್ಧಿಸಿದ್ದ ವಾರಣಾಸಿಯಲ್ಲಿ ಈ ಬಾರಿ ಬಿಜೆಪಿಗೆ ನಿರಾಸೆಯಾಗಿದೆ. ಸದ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಕೇವಲ 13,000 ಮತಗಳ ಮುನ್ನಡೆ ಸಾಧಿಸಿದ್ದಾರೆ. ಒಂದು ಹಂತದಲ್ಲಿ ಪ್ರಧಾನಿ ಮೋದಿಯವರಿಗೆ ಹಿನ್ನಡೆಯಾಗಿತ್ತು. ಆದರೆ ಈಗ ಅವರು ಅಲ್ಲಿ ಮತ್ತೆ ಪುನಶ್ಚೇತನಗೊಂಡು ಕಡಿಮೆ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಎನ್ ಡಿಎ ಈಗ 307 ಹಾಗೂ ಇಂಡಿಯಾ ಒಕ್ಕೂಟ 214 ಮತ್ತು ಇತರರು 23 ಸೀಟುಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.