ನವದೆಹಲಿ: ಭಾರತದ ಪ್ರಧಾನಿಯಾಗಿ ಸತತ ಮೂರನೇ ಬಾರಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಿದರು.
ವಿವಿಧ ಕ್ಷೇತ್ರದ ಗಣ್ಯರು ಸೇರಿ ವಿದೇಶಿ ಗಣ್ಯರೂ ಸಮಾರಂಭದಲ್ಲಿ ಭಾಗಿಯಾದರು. 9 ಸಾವಿರಕ್ಕೂ ಹೆಚ್ಚು ಗಣ್ಯರು ಸಮಾರಂಭದಲ್ಲಿ ಭಾಗಿಯಾದರು.
ಸೂಪರ್ ಸ್ಟಾರ್ ಗಳಾದ ಶಾರುಖ್ ಖಾನ್, ರಜನೀಕಾಂತ್, ಅಕ್ಷಯ್ ಕುಮಾರ್, ಉದ್ಯಮಿಗಳಾದ ಗೌತಮ್ ಅದಾನಿ, ಮುಕೇಶ್ ಅಂಬಾನಿ ಮತ್ತಿತರರು ಉಪಸ್ಥಿತರಿದ್ದರು.