Saturday, February 15, 2025
Homeರಾಷ್ಟ್ರೀಯಯುದ್ಧ ಸ್ಮಾರಕದಲ್ಲಿ ವೀರ ಯೋಧರಿಗೆ ಪ್ರಧಾನಿ ಮೋದಿ ನಮನ

ಯುದ್ಧ ಸ್ಮಾರಕದಲ್ಲಿ ವೀರ ಯೋಧರಿಗೆ ಪ್ರಧಾನಿ ಮೋದಿ ನಮನ

ದೇಶದಾದ್ಯಂತ 76ನೇ ಗಣರಾಜ್ಯೋತ್ಸವ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೆಹಲಿಯಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮ ವೀರ ಯೋಧರಿಗೆ ನಮನ ಸಲ್ಲಿಸಿದರು. ಇಂದು ಬೆಳಗ್ಗೆ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದರು. ದೇಶಕ್ಕಾಗಿ ಮಡಿದ ವೀರಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಮೋದಿ ಮತ್ತು ಇತರ ಗಣ್ಯರು ಕರ್ತವ್ಯ ಪಥದಲ್ಲಿನ ವೇದಿಕೆಗೆ ತೆರಳಿದರು. ಇಂದು ಬೆಳಗ್ಗೆ 10.30ಕ್ಕೆ ಸಮಾರಂಭದ ಮುಖ್ಯ ಮೆರವಣಿಗೆ ಆರಂಭವಾಗಿದ್ದು, ವಿಜಯ್ ಚೌಕ್ ನಲ್ಲಿ ಪ್ರಾರಂಭವಾಗಿ, ಕರ್ತವ್ಯ ಪಥದಲ್ಲಿ ಮುಂದುವರೆದಿದೆ. ಬಳಿಕ ಇಂಡಿಯಾ ಗೇಟ್ ಮೂಲಕ ಹಾದುಹಾಗಿ, ಕೆಂಪುಕೋಟೆಯಲ್ಲಿ ಮುಕ್ತಾಯಗೊಳ್ಳಲಿದೆ.

RELATED ARTICLES
- Advertisment -
Google search engine

Most Popular